– ರಾಘವೇಂದ್ರ ಅಡಿಗ ಎಚ್ಚೆನ್.

ಶಸ್ತ್ರಚಿಕಿತ್ಸೆ ಬಳಿಕ ನಟ ಶಿವಣ್ಣ ಚೇತರಿಸಿಕೊಂಡಿದ್ದು, ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಯರ ದರ್ಶನ ಪಡೆದರು.

FB_IMG_1740370067605

ವಿಶ್ರಾಂತಿಯಲ್ಲಿರುವ ಶಿವಣ್ಣ ಶೂಟಿಂಗ್​ನಿಂದ ಬಿಡುವು ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿದ್ದರು. ರಾಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಶಿವಣ್ಣ ಜೊತೆ ಪತ್ನಿ ಗೀತಾ ಶಿವರಾಜ್​ಕುಮಾರ್, ಪುತ್ರಿ ನಿವೇದಿತಾ ಕೂಡ ಇದ್ದರು. ಡಾ.ರಾಜ್ ಕುಟುಂಬ ಮೊದಲಿನಿಂದಲೂ ಗುರು ರಾಯರನ್ನು ಆರಾಧಿಸುತ್ತ ಬಂದಿದೆ.

FB_IMG_1740370075653

ಇನ್ನು ಕೆಲವೇ ದಿನಗಳಲ್ಲಿ ಶಿವಣ್ಣ ಚಿತ್ರೀಕರಣಕ್ಕೆ ವಾಪಸ್ಸಾಗಲಿದ್ದು, ಈಗಾಗಲೇ ಬಿರುಸಿನ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಸದ್ಯಕ್ಕೆ 45 ಸಿನಿಮಾ ಕೊನೆಯ ಹಂತದ ಪ್ಯಾಚ್ ವರ್ಕ್​ನಲ್ಲಿದೆ. ಪ್ರಮೋಷನಲ್ ಸಾಂಗ್ ಶೂಟಿಂಗ್​ಗಾಗಿ ಶಿವಣ್ಣ ಉಗಾಂಡಗೆ ತೆರಳುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಶಿವಣ್ಣಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಹೀಗಾಗಿ ಅಮೆರಿಕಗೆ ತೆರಳಿದ್ದ ಅವರು, ಅಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದಾರೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ