– ರಾಘವೇಂದ್ರ ಅಡಿಗ ಎಚ್ಚೆನ್.

ಇಂದಿನಿಂದ ಮಾ.8ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಒರಿಯಾನ್‌ ಮಾಲ್‌ ಹಾಗೂ ಸುಚಿತ್ರ ಫಿಲಂ ಸೊಸೈಟಿಯಲ್ಲಿ ನಡೆಯಲಿದೆ. ಸುಮಾರು 60 ದೇಶಗಳಿಂದ 200ಕ್ಕೂ ಹೆಚ್ಚು ಚಲನಚಿತ್ರಗಳನ್ನು ಪ್ರದರ್ಶನ ಕಾಣಲಿವೆ. ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಥೀಮ್‌ನಡಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ.

Festival

ಮಾರ್ಚ್ 1 ರ ಸಂಜೆ ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರದ ಉನ್ನತ ವ್ಯಕ್ತಿಗಳು ಚಲನಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ. ಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ‘ಬೆಂಗಳೂರಿನಲ್ಲಿ ಜಗತ್ತು’ ಎಂಬ ಶೀರ್ಷಿಕೆಯಡಿ ವಿದೇಶಿ ಚಿತ್ರಗಳ ಪ್ರದರ್ಶನ ನಡೆಯಲಿದೆ.

Festival 3

ರಾಜಾಜಿನಗರದ ಓರಾಯನ್ ಮಾಲ್‍ನ 11 ಸ್ಕ್ರೀನ್‍ಗಳಲ್ಲಿ ಸಾರ್ವಜನಿಕರಿಗೆ ಸಿನಿಮಾಗಳ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಚಿತ್ರೋತ್ಸವವು 7 ದಿನಗಳ ಕಾಲ ನಡೆಯಲಿದೆ. ಸಿನಿಮಾ ಆಸಕ್ತರು ಪಾಸ್‌ ಪಡೆದುಕೊಂಡು ಚಲನಚಿತ್ರೋತ್ಸವದಲ್ಲಿ ಭಾಗಿಯಾಗಬಹುದು. ಪಾಸ್‌ಗೆ ಸಾರ್ವಜನಿಕರಿಗೆ 800 ರೂ. ಹಾಗೂ ವಿದ್ಯಾರ್ಥಿ, ಹಿರಿಯ ನಾಗರಿಕರು, ಚಿತ್ರೋದ್ಯಮದ ಸದಸ್ಯರಿಗೆ 400 ರೂ. ಶುಲ್ಕವಿರಲಿದೆ. ಚಿತ್ರೋತ್ಸವದ ಜಾಲತಾಣದ ಮೂಲಕ ನೋಂದಾಯಿಸಿಕೊಳ್ಳಬಹುದು.

Festival 2

ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಂಡ ಪ್ರತಿನಿಧಿಗಳು ಫೆ.18 ರಿಂದ ನಂದಿನಿ ಲೇಔಟ್‍ನಲ್ಲಿರುವ ಚಲನಚಿತ್ರ ಅಕಾಡೆಮಿ ಹಾಗೂ ಶಿವಾನಂದ ಸರ್ಕಲ್‍ನಲ್ಲಿರುವ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಪ್ರತಿನಿಧಿ ಕಾರ್ಡ್‍ಗಳನ್ನು ಪಡೆಯಬಹುದು. ಮಾ.8ರ ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಂದು ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

Festival 1

ಚಿತ್ರೋತ್ಸವದಲ್ಲಿ ಏಷಿಯನ್, ಇಂಡಿಯನ್ ಹಾಗೂ ಕನ್ನಡ ಚಲನಚಿತ್ರಗಳ ಸ್ಫರ್ಧಾ ವಿಭಾಗಗಳಿದ್ದು, ಮೂರು ವಿಭಾಗಗಳಲ್ಲಿ ತಲಾ ಮೂರು ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಚಿತ್ರೋತ್ಸವದಲ್ಲಿ ಎಐ ಕುರಿತ ವಿಶೇಷ ಕಾರ್ಯಾಗಾರ ಮಾ.3ರಂದು ನಡೆಯಲಿದೆ. ತಜ್ಞರು ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಇದಲ್ಲದೇ ಹಿಂದಿನ ಕಾಲದಲ್ಲಿ ಇದ್ದ ಟೆಂಟ್ ಸಿನಿಮಾ ರೀತಿಯಲ್ಲಿ ಕೆಲ ಸಿನಿಮಾ ಪ್ರದರ್ಶನಗೊಳ್ಳಲಿವೆ. ಜೊತೆಗೆ ಒಟಿಟಿ, 2024ರ ಹಿಟ್ ಚಿತ್ರಗಳ ನಿರ್ದೇಶಕರೊಂದಿಗೆ ಸಂವಾದ, ಚಿತ್ರರಂಗದ ಸಾಧಕರೊಂದಿಗೆ ಮಾತುಕತೆ, ಚಿತ್ರ ವಿತರಣೆ, ನಿರ್ಮಾಣದ ಸವಾಲುಗಳ ಕುರಿತು ಉಪನ್ಯಾಸ ನಡೆಯಲಿದೆ. ಚಿತ್ರೋತ್ಸವಕ್ಕೆ ನಟ ಕಿಶೋರ್ ರಾಯಭಾರಿಯಾಗಿದ್ದಾರೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ