ಜಾಗೀರ್ದಾರ್*

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ “ಛೂ‌ ಮಂತರ್” ಚಿತ್ರ ಕಳೆದ ಜನವರಿಯಲ್ಲಿ ಬಿಡುಗಡೆಯಾಗಿತ್ತು. ವಿಭಿನ್ನ‌ ಕಥಾಹಂದರದ ಮೂಲಕ ಜನಮನ ಗೆದ್ದಿರುವ ಈ ಚಿತ್ರ ಈಗ ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ 50 ದಿನ ಪ್ರದರ್ಶನ ಕಂಡಿದೆ. ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಚಿತ್ರಮಂದಿರಗಳಿಗೆ ಜನರೇ ಬರುತ್ತಿಲ್ಲ ಎಂದು ಹೇಳುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಚಿತ್ರವೊಂದು 50 ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಸಂತಸದ ಸಂಗತಿ. ಚಿತ್ರಕ್ಕೆ ಸಿಕ್ಕಿರುವ ಪ್ರಶಂಸೆಗೆ ಚಿತ್ರತಂಡ ಸಹ ಖುಷಿಯಾಗಿದೆ. ಇದು ಈ ವರ್ಷದ ಮೊದಲ ಕನ್ನಡದ ಹಿಟ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕನ್ನಡದಲ್ಲಿ ಸಾಮಾನ್ಯವಾಗಿ ಸಂಕ್ರಾಂತಿ ಸಂದರ್ಭದಲ್ಲಿ ಚಿತ್ರ ಬಿಡುಗಡೆಯಾದರೆ ಓಡುವುದಿಲ್ಲ‌ ಎಂಬ ನಂಬಿಕೆಯಿತ್ತು. ಆದರೆ ನಮ್ಮ ಚಿತ್ರವನ್ನು ಸಂಕ್ರಾಂತಿ ಸಮಯಕ್ಕೆ ಬಿಡುಗಡೆ ಮಾಡಿದ್ದೆವು. ಈಗ 50 ದಿನಗಳ ಪ್ರದರ್ಶನ ಕಂಡು ಆ ಅಪವಾದವನ್ನು ನಮ್ಮ‌ ಚಿತ್ರ ದೂರ ಮಾಡಿದೆ ಎಂದು ತಿಳಿಸಿರುವ ನಿರ್ಮಾಪಕ ತರುಣ್ ಶಿವಪ್ಪ ಚಿತ್ರದ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ‌ಹೇಳಿದ್ದಾರೆ.

ಶರಣ್ , ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ “ಛೂ ಮಂತರ್” ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ