ಖಲೆಯ 16ನೇ ರಾಜ್ಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವರಿಗೂ ಸಮಪಾಲು ಅನ್ನೋ ಸೂತ್ರ ಜಾರಿಗೊಳಿಸಿ ಎಲ್ಲಾ ವರ್ಗಕ್ಕೂ ಅನುದಾನ ಹಂಚಿ ಈ ಬಾರಿಯೂ ಸೈ ಎನಿಸಿಕೊಂಡಿದ್ದಾರೆ. ಅದರಲ್ಲೂ ಮಹಿಳೆಯರಿಗೆ ವಿಶೇಷ ಸವಲತ್ತು ಪ್ರಕಟಿಸಿರೋದ್ರಿಂದ ಮಹಿಳಾ ದಿನಾಚರಣೆಯಾದ ಇಂದು ಮಹಿಳೆಯರಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗೆ ಬರೋಬ್ಬರಿ 94,084 ಕೋಟಿ ರೂಪಾಯಿ ಅನುದಾನ ಘೋಷಿಸಿರುವುದು ವಿಶೇಷವಾಗಿದೆ. ಈ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಾರ್ಥಕಗೊಳಿಸಿದ್ದಾರೆ. ಹಾಗಾದ್ರೆ, ಮಹಿಳೆಯರಿಗೆ ಸಿದ್ದರಾಮಯ್ಯ ಘೋಷಿಸಿರುವ ವಿಶೇಷ ಕೊಡುಗೆಗಳೇನು ಅನ್ನೋದನ್ನ ನೋಡೋಣ ಬನ್ನಿ.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ‘ಶಕ್ತಿ’ ಯೋಜನೆಗೆ 5300 ಕೋಟಿ ರೂಪಾಯಿ ಅನುದಾನವನ್ನು ಈ ಬಜೆಟ್ನಲ್ಲಿ ಮೀಸಲಿರಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.22 ಕೋಟಿ ಕುಟುಂಬ ಯಜಮಾನಿಯರಿಗೆ 28,608 ಕೋಟಿ ರೂಪಾಯಿ ಕೊಟ್ಟಿದ್ದು, ಜಿಲ್ಲೆ ಮತ್ತು ತಾಲೂಕು ಪಂಚಾಯಿತಿ ಕಚೇರಿ ಆವರಣಗಳಲ್ಲಿ ‘ಅಕ್ಕ ಕೆಫೆ ಮತ್ತು ಕ್ಯಾಂಟೀನ್’ ತೆರೆಯುವುದಾಗಿ ಹೇಳಿದ್ದಾರೆ. ಮೊಟ್ಟೆ ತರಕಾರಿ ಪೂರೈಸಲು ಸ್ವ-ಸಹಾಯ ಸಂಘಗಳ ಕಿರು ಉದ್ಯಮಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಸ್ವ-ಸಹಾಯ ಸಂಘಗಳ ಮೂಲಕ ಪ್ರತಿ ಜಿಲ್ಲೆಯಲ್ಲಿ ಒಂದು ‘ಸಮುದಾಯ ಪ್ರವಾಸಿ ಯೋಜನೆ’ ಆರಂಭಿಸುವುದಾಗಿ ಸಿಎಂ ಹೇಳಿದ್ದಾರೆ.
ಇನ್ನು ಮಹಿಳೆಯರ ಸುರಕ್ಷತೆಗೆ ವಸತಿ ನಿಲಯ ನಿರ್ಮಾಣ ಮಾಡೋದಾಗಿ ತಿಳಿಸಿದ್ದು, ಕೋಲಾರ ಜಿಲ್ಲೆಯ ನರಸಾಪುರದಲ್ಲಿ 173 ಕೋಟಿ ವೆಚ್ಚದಲ್ಲಿ 6000 ಬೆಡ್ ಸಾಮರ್ಥ್ಯದ ಮಹಿಳಾ ವಸತಿ ನಿಲಯ, ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕಾ ಪ್ರದೆಶದಲ್ಲಿ 20 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಿಸಲಾಗುತ್ತದೆ.

ಅಲ್ಪಸಂಖ್ಯಾತ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೂರಕವಾಗಿ ಈ ವರ್ಷ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ. ಇನ್ನು ವಿಶೇಷ ಅಂದ್ರೆ, ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಲಿಕೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವಧನವನ್ನು 1000 ಮತ್ತು 750 ರೂಪಾಯಿ ಹೆಚ್ಚಳ ಮಾಡಿದ್ದಾರೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವ 1 ಲಕ್ಷ ರೂಪಾಯಿ ಸಾಲ ಮತ್ತು ಒಂದೂವರೆ ಲಕ್ಷ ರೂಪಾಯಿ ಸಹಾಯಧನವನ್ನು ಕ್ರಮವಾಗಿ 2.50 ಲಕ್ಷ ರೂಪಾಯಿ ಮತ್ತು 3.50 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಮಹಿಳಾ ಉನ್ನತ ಶಿಕ್ಷಣ ಬಲವರ್ಧನೆಗಾಗಿ 26 ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ 26 ಕೋಟಿ, ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಇಂಗ್ಲೇಂಡ್ನ ಪ್ರತಿಷ್ಟಿತ ವಿವಿಗಳಲ್ಲಿ ‘ಚೆವನಿಂಗ್ ಕರ್ನಾಟಕ ಮಾಸ್ಟರ್ಸ್ ಫೆಲೋಶಿಪ್’ ನೆರವಿನೊಂದಿಗೆ 1 ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆಯನ್ನು ರೂಪಿಸಲಾಗಿದೆ.
ಅಷ್ಟೇ ಅಲ್ಲ, ಜಿಲ್ಲೆ ಮತ್ತು ತಾಲೂಕು ಪಂಚಾಯಿತಿ ಕಚೇರಿ ಆವರಣಗಳಲ್ಲಿ ‘ಅಕ್ಕ ಕೆಫೆ ಮತ್ತು ಕ್ಯಾಂಟೀನ್’ ಸ್ಥಾಪನೆ, ಶಾಲೆ, ಅಂಗನವಾಡಿ ಮತ್ತು ವಸತಿ ನಿಲಯಗಳಿಗೆ ಮೊಟ್ಟೆ ಮತ್ತು ತರಕಾರಿ ಪೂರೈಸಲು ಸ್ವ-ಸಹಾಯ ಸಂಘಗಳ ಕಿರುಉದ್ಯಮಗಳಿಗೆ ಪ್ರೋತ್ಸಾಹ, ಸ್ವ-ಸಹಾಯ ಸಂಘಗಳ ಮೂಲಕ ಜಿಲ್ಲೆಯಲ್ಲಿ 1 ‘ಸಮುದಾಯ ಪ್ರವಾಸಿ ಯೋಜನೆ’ ರೂಪಿಸೋದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇನ್ನು ಹೆರಿಗೆ ವೇಳೆ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು 320 ಕೋಟಿ ರೂಪಾಯಿ ವೆಚ್ಚದ ಯೋಜನೆ ರೂಪಿಸಲಾಗುತ್ತಿದೆ ಅಂತಾ ಪ್ರಕಟಿಸುವ ಮೂಲಕ ಮಹಿಳೆಯರಿಗೆ ಮುಖ್ಯಮಂತ್ರಿಗಳು ದೊಡ್ಡ ಉಡುಗೊರೆ ನೀಡಿದ್ದಾರೆ.





