ಕಾಲಿವುಡ್ ಸ್ಟಾರ್‌ ನಟ ದಳಪತಿ ವಿಜಯ್ ಈಗ ಸಿನಿಮಾಗಿಂತಲೂ ರಾಜಕೀಯದ ಕಡೆ ಹೆಚ್ಚಾಗಿ  ಗಮನ ಹರಿಸುತ್ತಿದ್ದಾರೆ. ತಮ್ಮದೇ  ಹೊಸ ಪಕ್ಷ ಸ್ಥಾಪಿಸಿಕೊಂಡು ರಾಜಕೀಯಕ್ಕೆ ಧುಮುಕಿದ್ದಾರೆ. ಹಾಗಾಗಿ ಚಿತ್ರರಂಗಕ್ಕೆ ಗುಡ್‌ ಬೈ ಹೇಳಲಿದ್ದಾರೆ..

ಅವರು ನಟಿಸಿರುವ ಕೊನೇ ಸಿನಿಮಾ ‘ಜನ ನಾಯಗನ್’ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ.

ಹೌದು 2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ… ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ  ಹೈ ಬಜೆಟ್ ನೊಂದಿಗೆ ಸೆಟ್ಟೇರಿರೋ ಸಿನಿಮಾ ಜನನಾಯಕನ್.. ಈ ಸಿನಿಮಾ ಹಲವು ವಿಶೇಷಗಳಿಗೆ ಕಾರಣವಾಗಿದೆ..

ಅದ್ರಲ್ಲಿ ಪ್ರಮುಖ ಕಾರಣವೆಂದ್ರೆ, ಇದು ದಳಪತಿ ವಿಜಯ್ ಅಭಿನಯದ 69ನೇ ಸಿನಿಮಾ ಮತ್ತು ಸಿನಿ ಬದುಕಿನಿಂದ ನಿವೃತ್ತಿ ಪಡೆದು ಫುಲ್ ಟೈಂ ರಾಜಕಾರಣಿಯಾಗೋಕೆ ಹೊರಟಿರೋ ವಿಜಯ್ ಕೊನೆಯ ಸಿನಿಮಾ..

ಹೌದು ಕೆವಿಎನ್ ಪ್ರೊಡಕ್ಷನ್ಸ್ ಅಂದ್ರೆನೇ ಹಾಗೆ.. ದೇಶದ ದಕ್ಷಿಣ ಸಿನಿ ಇಂಡಸ್ಟ್ರಿಯಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ಮೈಲಿಗಲ್ಲನ್ನೇ ಸ್ಥಾಪಿಸಿದೆ.. ಸ್ಯಾಂಡಲ್​ವುಡ್​ ಸೇರಿದಂತೆ  ಬಾಲಿವುಡ್‌, ಟಾಲಿವುಟ್‌‌ ಹಾಗೂ ಕಾಲಿವುಡ್‌ ಸಿನಿಮಾಗಳನ್ನ ನಿರ್ಮಿಸುತ್ತಿದೆ..

ಸಿನಿಮಾ ಅದ್ದೂರಿಯಾಗಿ ಮೂಡಿ ಬರಬೇಕು ಅನ್ನೋದು ಕೆವಿಎನ್ ಪ್ರೊಡಕ್ಷನ್ಸ್ ಒನ್ ಲೈನ್ ಅಜೆಂಡಾ. ಮತ್ತೊಂದು ಪ್ರಮುಖ ಅಜೆಂಡಾ ಅಂದ್ರೆ, ಅದು ಹಣ ಕೊಟ್ಟು ಸಿನಿಮಾ ನೋಡುವ ಸಿನಿರಸಿಕರಿಗೆ ಮೋಸವಾಗಬಾರದು..

ಸಿನಿಮಾ ನೋಡಿ ಎದ್ದು ಹೊರಬರುವ ಪ್ರೇಕ್ಷಕನ ಮನದಲ್ಲಿ ಮತ್ತೊಮ್ಮೆ ಸಿನಿಮಾ ನೋಡಬೇಕು ಎನ್ನುವಷ್ಟರ ಮಟ್ಟಿಗೆ ಸಿನಿಮಾ ಮಾಡುವ ಗುರಿ ಕೆವಿಎನ್ ಪ್ರೊಡಕ್ಷನ್ಸ್​ನವರದ್ದು. ಇದೀಗ ತಮಿಳು ಚಿತ್ರರಂಗಕ್ಕೆ ಕಾಲಿಡೋ ಮೂಲಕ ಬಿಗ್ ಸರ್ಪ್ರೈಸ್ ನೀಡಿದೆ.…

ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ಮುಖ್ಯಸ್ಥ ವೆಂಕಟ್ ಕೆ. ನಾರಾಯಣ ಎಲ್ಲಾ ಭಾಷೆಗಳಲ್ಲಿ ಬಿಗ್‌ ಸ್ಟಾರ್ಸ್ ಜೊತೆಗೆ‌ ದೊಡ್ಡ ಪ್ರಮಾಣದ ಸಿನಿಮಾಗಳನ್ನು ಮಾಡುತ್ತಿದ್ದಾರೆ.

ಇದೀಗ ತಮಿಳಿನ ಖ್ಯಾತ ನಟ ಇಳಯದಳಪತಿ ವಿಜಯ್ 69ನೇ ಚಿತ್ರ ಕೆವಿಎನ್ ಸಾರಥ್ಯದಲ್ಲಿ ಮೂಡಿ ಬರುತ್ತಿದೆ. ದಳಪತಿಯ 69ನೇ ಚಿತ್ರ ಇದಾಗಿದ್ದು,  ಹೈ ಬಜೆಟ್​ನಲ್ಲಿ ಚಿತ್ರ ತಯಾರಾಗುತ್ತಿದ್ದು,  ಈಗಾಗಲೇ ದೊಡ್ಡ ಬಜೆಟ್​ನಲ್ಲಿ ಕೆವಿಎನ್ ಕೆ ವೆಂಕಟ್ ನಾರಾಯಣ ಅವರು ಬಂಡವಾಳ ಹೂಡಿದ್ದಾರೆ. ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಇನ್ನು ಈ ಸಿನಿಮಾ ತಮಿಳುನಾಡಿನ ಹೆಮ್ಮೆಯ ಹಬ್ಬ ಪೊಂಗಲ್ ದಿನ ತೆರೆ ಮೇಲೆ ಅಬ್ಬರಿಸಲಿದೆ..

ಜನನಾಯಕನ ಆಗಮನಕ್ಕಾಗಿ ದಳಪತಿ ವಿಜಯ್ ಅಭಿಮಾನಿಗಳಷ್ಟೆ ಇಡೀ ದಕ್ಷಿಣ ಭಾರತ ಕಾಯುತ್ತಿದೆ. ಈ ಸಿನಿಮಾಗೆ ಬಂಡವಾಳ ಹಾಕಿರುವ ಕೆವಿಎನ್ ಪ್ರೊಡಕ್ಷನ್ಸ್ ಯಾವುದಕ್ಕೂ ಕೊರತೆ ಇಲ್ಲದಂತೆ ಚಿತ್ರ ನಿರ್ಮಾಣ ಮಾಡುತ್ತಿದೆ. ಅದು ಕೆವಿಎನ್ ಪ್ರೊಡಕ್ಷನ್ ಸ್ಟೈಲ್ ಕೂಡ. ಅವರು ಯಾವುದೇ ಸಿನಿಮಾ ಮಾಡಲಿ, ನಿರ್ಮಾಣದಲ್ಲಿ ಸಣ್ಣದೊಂದು ಹುಳುಕು ಹುಡುಕೋದು ಕಷ್ಟ. ಕೆವಿಎನ್ ಮತ್ತು ದಳಪತಿ ಒಂದಾಗಿ ಜನನಾಯಕನ ಸಿದ್ದತೆಯಲ್ಲಿ ತೊಡಗಿದ್ದಾರೆ…ಇನ್ನು ವಿದಾಯದ ಸಿನಿಮಾ ಅಂದ್ಮೇಲೆ ಏನೆಲ್ಲ ಇರಬೇಕೋ ಅದೆಲ್ಲವೂ ಇರುತ್ತದೆ ಅಂತ ಹೇಳಲಾಗ್ತಿದೆ. ಈ ಸಿನಿಮಾ ಮೂಲಕ ಒಬ್ಬ ದಳಪತಿಗೆ ಯೋಗ್ಯವಾದ ವಿದಾಯವೇ ಸಿಗುತ್ತಿದ್ದು,  ಈ ನಿಟ್ಟಿನಲ್ಲಿ ಕೆವಿಎನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.…

ಹೆಚ್ ವಿನೋತ್ ನಿರ್ದೇಶಿಸಿ, ಅನಿರುದ್ದ್ ರವಿಚಂದರ್ ಸಂಗೀತ ನೀಡಿರುವ ಸಿನಿಮಾ ಕೋಟ್ಯಾನುಕೋಟಿ ದಳಪತಿ ವಿಜಯ್ ಅಭಿಮಾನಿಗಳ ಹೃದಯ ಗೆಲ್ಲೋದ್ರಲ್ಲಿ ನೋ ಡೌಟ್.…

 

ಒಂದು ಕಡೆ ಹಬ್ಬದ ಸಂಭ್ರಮ ಅವತ್ತು ಮನೆ ಮಾಡಿರುತ್ತೆ. ಮತ್ತೊಂದು ಕಡೆ ದಳಪತಿ ವಿಜಯ್ ಅದ್ದೂರಿ ಬೀಳ್ಕೊಡುಗೆ ಈ ಸಿನಿಮಾ ಮೂಲಕ ಸಿಗಲಿದೆ. ಜನನಾಯಗನ್ ನೋಡೋದಿಕ್ಕೆ ಜನ ಕೂಡ ಕಾತುರದಿಂದ ಕಾಯುತ್ತಿದ್ದಾರೆ. ಸಖತ್ ಸಿನಿಮಾ ಮೂಲಕ ಸಿನಿ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಕೆವಿಎನ್ ಪ್ರೊಡಕ್ಷನ್ಸ್ ಡಿಸ್ಟ್ರಿಬ್ಯುಷನ್ ಕಾರ್ಯದಲ್ಲೂ ಒಳ್ಳೆ ಹೆಸರು ಮಾಡಿದೆ.…

ಇನ್ನು ನಿರ್ಮಾಣದ ವಿಚಾರಕ್ಕೆ ಬಂದ್ರೆ ಬಿಗ್‌ ಸ್ಟಾರ್‌ಗಳ ಬಿಗ್‌ ಬಜೆಟ್ ಸಿನಿಮಾ ನಿರ್ಮಾಣದ ಮೂಲಕ ‌ ದೇಶಾದ್ಯಂತ ಹೆಸರು ಮಾಡಿದೆ.…

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ