ಬಹುಭಾಷಾ ನಟಿಯಾಗಿ ಮಿಂಚುತ್ತಿರುವ ಕರುನಾಡ ಕೊಡಗಿನ ಕುವರಿ ನಟಿ ರಶ್ಮಿಕಾ ಮಂದಣ್ಣಗೆ ಇದೇ ತಿಂಗಳು ಬರ್ತ್​ಡೇ ಸಂಭ್ರಮ. ಏಪ್ರಿಲ್​ 5ರಂದು 29ನೇ ವರ್ಷಕ್ಕೆ ಕಾಲಿಡುತ್ತಿರುವ ರಶ್ಮಿಕಾ ಹೊಸ ಪೋಸ್ಟ್​ ಹಾಕಿದ್ದಾರೆ. ತಮ್ಮ ಜನ್ಮದಿನಕ್ಕೆ ಸಖತ್ ಎಕ್ಸೈಟ್ ಆಗಿದ್ದಾರೆ. ಅಷ್ಟೇ ಅಲ್ಲ.. ನಂಗೆ ವಯಸ್ಸು ಆಗ್ತಿದ್ಯಲ್ಲಾ ಅಂತಾ ಫೀಲ್ ಮಾಡ್ಕೊಂಡಿದ್ದಾರೆ. ದಕ್ಷಿಣ ಭಾರತದ ಫೇಮಸ್ ನಟಿಯಾಗಿ ಬಾಲಿವುಡ್​​ನಲ್ಲೂ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಈಗ ಬಹುಬೇಡಿಕೆಯ ನಟಿಯಾಗಿದ್ದಾರೆ. ಇಂಥಾ ಹೊತ್ತಿನಲ್ಲಿ ತಮ್ಮ ಹುಟ್ಟುಹಬ್ಬಕ್ಕೆ ಹೀಗೆ ಸ್ಟೋರಿ ಹಾಕಿರೋದು ಅಭಿಮಾನಿಗಳಲ್ಲಿ ಮತ್ತಷ್ಟು ಸಖತ್ ಕ್ರೇಜ್ ಕ್ರಿಯೇಟ್ ಮಾಡಿದೆ.

ಸ್ಟಾರ್ ಹೀರೋಗಳ ಪಾಲಿಗೆ ರಶ್ಮಿಕಾ ಮಂದಣ್ಣ ಅವರು ಲಕ್ಕಿ ಹೀರೋಯಿನ್ ಆಗಿದ್ದಾರೆ. 20ನೇ ವಯಸ್ಸಿನಲ್ಲಿ ಹೀರೋಯಿನ್ ಆದ ರಶ್ಮಿಕಾ ಈಗ 29ನೇ ವಯಸ್ಸಿಗೆ ಕಾಲಿಡುತ್ತಿದ್ದು, ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ತುಂಬಾನೇ ಉತ್ಸುಕರಾಗಿದ್ದಾರೆ.

‘ನನ್ನ ಬರ್ತ್​ಡೇ ತಿಂಗಳು ಬಂದಿದೆ. ನಾನು ತುಂಬ ಎಗ್ಸೈಟ್ ಆಗಿದ್ದೇನೆ. ವಯಸ್ಸು ಆದಂತೆಲ್ಲ ನಿಮಗೆ ಹುಟ್ಟುಹಬ್ಬ ಆಚರಣೆ ಮಾಡುವ ಆಸಕ್ತಿ ಕಡಿಮೆ ಆಗುತ್ತದೆ ಎಂಬುದನ್ನು ನಾನು ಕೇಳಿದ್ದೇನೆ. ಆದರೆ ನನ್ನ ವಿಚಾರದಲ್ಲಿ ಹಾಗಿಲ್ಲ. ವಯಸ್ಸು ಜಾಸ್ತಿ ಆದಂತೆಲ್ಲ ನನಗೆ ಬರ್ತ್​ಡೇ ಆಚರಣೆ ಮಾಡುವ ಉತ್ಸಾಹ ಜಾಸ್ತಿ ಆಗುತ್ತಿದೆ’ ಅಂತಾ ರಶ್ಮಿಕಾ ಮಂದಣ್ಣ ತಮ್ಮ ಇನ್​ಸ್ಟಾದಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಾರೆ.

‘ನಾನು ಈಗ 29ನೇ ವರ್ಷಕ್ಕೆ ಕಾಲಿಡುತ್ತಿದ್ದೇನೆ ಅಂತ ನಂಬೋಕೆ ಆಗುತ್ತಿಲ್ಲ. ಖುಷಿಯಾಗಿ, ಆರೋಗ್ಯಕರವಾಗಿ, ಸುರಕ್ಷಿತವಾಗಿ ಇನ್ನೊಂದು ವರ್ಷ ಕಳೆದಿದ್ದೇನೆ. ಇದು ಸೆಲೆಬ್ರೇಟ್ ಮಾಡುವ ಸಮಯ’ ಅಂತಾ ರಶ್ಮಿಕಾ ಮಂದಣ್ಣ ಅವರು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳು ಈಗಾಗಲೇ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಆರಂಭಿಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ