ಜಾಗೀರ್ದಾರ್*

ಮೊದಲ ಚಿತ್ರದಲ್ಲೇ ಮೋಡಿ ಮಾಡಿದ ಸುರದ್ರೂಪಿ ನಟನಿಗೆ ಕನ್ನಡ ಸೇರಿದಂತೆ ಬೇರೆ ಭಾಷೆಗಳಿಂದಲೂ ಬರುತ್ತಿದೆ ಅವಕಾಶ* .

ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ “ಗೌರಿ” ಚಿತ್ರ ಕಳೆದವರ್ಷ ತೆರೆ ಕಂಡು ಜನಪ್ರಿಯವಾಗಿತ್ತು ಹಾಗೂ ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿತ್ತು. ಯುವಜನತೆಯಂತೂ ಸಮರ್ಜಿತ್ ಅಭಿನಯಕ್ಕೆ ಫಿದಾ ಆಗಿದ್ದರು.‌ ಆನಂತರ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು.

ಅಲ್ಲೂ ಸಹ ಈ ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ.. ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯದಾಗಿನಿಂದ ಹಿಡಿದು ಈವರೆಗೂ ಎರಡುವರೆ ಲಕ್ಷ ಗಂಟೆಗಳ ಕಾಲ‌ ಈ ಚಿತ್ರ ವೀಕ್ಷಣೆಯಾಗಿದೆ. ಅಧಿಕ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಇದರಿಂದ ಸಮರ್ಜಿತ್ ಲಂಕೇಶ್ ಅವರಿಗೆ ಕನ್ನಡ ಸೇರಿದಂತೆ ಅನೇಕ ಭಾಷೆಗಳಿಂದ ನಟಿಸಲು ಅವಕಾಶಗಳು ಬರುತ್ತಿದೆ. ನಾಯಕನಾಗಲೂ ಸಮರ್ಜಿತ್ ಪಟ್ಟ ಶ್ರಮಕ್ಕೆ ಪ್ರತಿಫಲ ದೊರಕುತ್ತಿದೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ