ಸಿನಿಮಾಗಳ ಹೊರತಾಗಿ ಆಗಾಗ ಸುದ್ದಿಯಲ್ಲಿರುವ ನಿತ್ಯಾ ಮೆನನ್, ಇದೀಗ ತಮ್ಮ ಇನ್ಸ್​ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಚಿತ್ರಗಳು ವಿವಾದಕ್ಕೆ ಕಾರಣವಾಗಿವೆ. ಅವರ ಅಶ್ಲೀಲ ಫೋಟೋಗಳನ್ನು ನೋಡಿ ನೆಟ್ಟಿಗರು ಕಿಡಿಕಾರುತ್ತಿದ್ದಾರೆ.

Nithya menon

ಕನ್ನಡದ “ಮೈನಾ” ಚಿತ್ರದ ಮೂಲಕ ಖ್ಯಾತಿ ಗಳಿಸಿದ ಈ ಬೆಡಗಿ, ತನ್ನ ಸೌಂದರ್ಯ ಮತ್ತು ನಟನೆಯಿಂದ ತನ್ನದೇ ಆದ ಅಭಿಮಾನಿಗಳನ್ನು ಗಳಿಸಿದ್ದಾರೆ. ಅದೇ ರೀತಿ, ಕಡಿಮೆ ಸಮಯದಲ್ಲೇ ಸ್ಟಾರ್ ಹೀರೋಗಳ ಜೊತೆ ನಟಿಸುವ ಅವಕಾಶಗಳನ್ನು ಸಹ ಗಿಟ್ಟಿಸಿಕೊಂಡವರು.

ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ ಅವರು 7 O Clock, ಜೋಷ್‌, ಐದೊಂದಲ ಐದು, ಮೈನಾ, ಕೋಟಿಕೊಬ್ಬ 2 ಸೇರಿದಂತೆ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸುವ ಮೂಲಕ ಕನ್ನಡಿಗರಿಗೆ ಹತ್ತಿರವಾಗಿದ್ದಾರೆ.

ಇತ್ತೀಚೆಗೆ ನಟಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಒಂದು ಫೋಟೋ ಬೆತ್ತಲೆ ಮತ್ತು ಅಸಭ್ಯವಾಗಿದ್ದು, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ನಗ್ನ ಚಿತ್ರದ ಮುಂದೆ ನಿಂತು ಸೆಲ್ಫಿ ತೆಗೆದುಕೊಂಡು, ಆ ಫೋಟೋವನ್ನು ಶೇರ್‌ ಮಾಡಿಕೊಂಡಿದ್ದಾರೆ.

ಈ ಫೋಟೋ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ನಟಿಯ ವಿರುದ್ಧ ಹರಿಹಾಯ್ದಿದ್ದಾರೆ. ನಿತ್ಯಾ ಮೆನನ್ ಈ ರೀತಿಯ ಚಿತ್ರಗಳನ್ನು ಪೋಸ್ಟ್ ಮಾಡುತ್ತಿರುವುದಕ್ಕೆ ಕೋಪಗೊಂಡಿದ್ದಾರೆ. ಒಟ್ಟಿನಲ್ಲಿ ನಿತ್ಯಾ ಮೆನನ್ ಪ್ರಸ್ತುತ ತಮ್ಮ ವಿವಾದಾತ್ಮಕ ಫೋಟೋಗಳಿಂದಲೇ ಸುದ್ದಿಯಲ್ಲಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ