ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೆಜೆಸ್ಟಿಕ್‌ನಲ್ಲಿರುವ ಅಣ್ಣಮ್ಮ ದೇಗುಲಕ್ಕೆ ಭೇಟಿ ನೀಡಿ, ಅಣ್ಣಮ್ಮ ದೇವಿಗೆ ಹರಕೆ ಸಲ್ಲಿಸಿದ್ದಾರೆ.

ದರ್ಶನ್ ಜೈಲಿನಲ್ಲಿದ್ದಾಗ ವಿಜಯಲಕ್ಷ್ಮಿ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಇದೀಗ ಅಣ್ಣಮ್ಮ ದೇವಿಗೆ ವಿಜಯಲಕ್ಷ್ಮಿ ಹರಕೆ ಸಲ್ಲಿಸಿದ್ದಾರೆ. ಅಣ್ಣಮ್ಮ ದೇವಿಗೆ ಸೀರೆ ಜೊತೆ ಮಡಿಲಕ್ಕಿ ತುಂಬಿ ಹರಕೆ ತೀರಿಸಿದ್ದಾರೆ.

ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ‘ಡೆವಿಲ್’ ಶೂಟಿಂಗ್‌ನಲ್ಲಿ ದರ್ಶನ್ ಜೊತೆ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಪಾಲ್ಗೊಂಡಿದ್ದರು. ಕಳೆದ ವಾರವಷ್ಟೇ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ಹಿಂದಿರುಗಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ