ಜಾಗೀರ್ದಾರ್*

ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನಪ್ರಿಯವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಪ್ರಿ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿತು. ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ನವರಸನ್ ಅವರನ್ನು ಬಹಳ ವರ್ಷಗಳಿಂದ ನೋಡುತ್ತಿದ್ದೇನೆ. ಅವರ ಮುಖದಲ್ಲಿ ಸದಾ ನಗು ಇರುತ್ತದೆ. ಇನ್ನೂ ಒಬ್ಬ ನಿರ್ಮಾಪಕ ತನ್ನ ಚಿತ್ರವನ್ನು ಹೆಚ್ಚು ಪ್ರೀತಿಸಬೇಕು. ಅದಕ್ಕೆ ಈ ಸಮಾರಂಭ ಸಾಕ್ಷಿ. ಹಾಡುಗಳ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ ನಾಯಕನಾಗಿ ಮೊದಲ ಬಾರಿಗೆ ಬೆಳ್ಳಿತೆರೆ ಮೇಲೆ ಬರುತ್ತಿದ್ದಾರೆ‌. ಟ್ರೇಲರ್ ವಿಭಿನ್ನವಾಗಿದೆ. ಚಿತ್ರ ಕೂಡ ಇದೇ ರೀತಿ ಇರುತ್ತದೆ ಎಂಬ ಭರವಸೆ ಇದೆ ಎಂದು ರವಿಚಂದ್ರನ್ ತಿಳಿಸಿದರು.

jugalbandi 1

ನವರಸನ್ ನಮ್ಮ ಸಾಕಷ್ಟು ಇವೆಂಟ್ ಗಳನ್ನು ಮಾಡಿಕೊಟ್ಟಿದ್ದಾರೆ. ನಾನು ಚಂದನ್ ಶೆಟ್ಟಿ ಅವರ ಹಾಡುಗಳಿಗೆ ಅಭಿಮಾನಿ. ಅವರ ಕೆಲವು ಹಾಡುಗಳನ್ನು ಗುನುಗುತ್ತಿರುತ್ತೇನೆ. ಈ ಚಿತ್ರದ ಮೂಲಕ ಅವರು ನಾಯಕನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಹಾರೈಸಿದ ಶಿವರಾಜಕುಮಾರ್, ನಾನು ಈ ಚಿತ್ರವನ್ನು ನೋಡುತ್ತೇನೆ ಎಂದರು.

ರವಿಚಂದ್ರನ್ ಹಾಗೂ ಶಿವಣ್ಣ ಅವರು ಬಂದು ನಮ್ಮ ಚಿತ್ರಕ್ಕೆ ಬಂದು ಹಾರೈಸಿದ್ದು ಬಹಳ ಖುಷಿಯಾಗಿದೆ. ಇಬ್ಬರಿಗೂ ನಾನು ಚಿರ ಋಣಿ.  ಮೇ 9 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ನವರಸನ್

 

 

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ