ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಅವರು ಕೇನ್ಸ್ ಫಿಲ್ಮ್ ಫೆಸ್ಟಿವಲ್‌ನ ರೆಡ್ ಕಾರ್ಪೆಟ್‌ನಲ್ಲಿ ಹೆಜ್ಜೆ ಹಾಕಿದ್ದು, ತಮ್ಮ ಸುಂದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.ಕೇನ್ಸ್ ಫಿಲ್ಮ್ ಫೆಸ್ಟಿವಲ್‌ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ. ಈ ಸಿನಿಮಾ ಹಬ್ಬದಲ್ಲಿ ಕನ್ನಡದ ನಟಿ ಪ್ರಣಿತಾ ಸುಭಾಷ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕೇನ್ಸ್ ಚಲನಚಿತ್ರೋತ್ಸವದಲ್ಲಿ ಮೂರು ಬಗೆಯ ಡಿಫರೆಂಟ್ ಧಿರಿಸಿನಲ್ಲಿ ಮಿಂಚಿದ್ದಾರೆ. ಬೇಬಿ ಪಿಂಕ್ ಡ್ರೆಸ್, ರೆಡ್ ಕಲರ್ ಡ್ರೆಸ್ ಮತ್ತು ಸೀರೆಯಲ್ಲಿ ಅವರು ಕಂಗೊಳಿಸಿದ್ದಾರೆ.
ಅದರಲ್ಲೂ ಕೇನ್ಸ್ನಲ್ಲಿ ಪಿಂಕ್ ಡ್ರೆಸ್ ಜೊತೆ ನಟಿ ಧರಿಸಿದ್ದ ದುಬಾರಿ ವಾಚ್ ಎಲ್ಲರ ಗಮನ ಸಳೆದಿದೆ. ಆ ವಾಚ್ ಬೆಲೆ 75 ಸಾವಿರದಿಂದ 1 ಲಕ್ಷ ರೂ. ಎನ್ನಲಾಗಿದೆ.ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿದ್ದ ಬಗ್ಗೆ ನಟಿ ಮಾತನಾಡಿ, ಕೇನ್ಸ್ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಳ್ಳಬೇಕು ಎಂದು ಚಿಕ್ಕ ವಯಸ್ಸಿನಲ್ಲಿ ಕಾಣುತ್ತಿದ್ದ ಕನಸು ಈಗ ನನಸಾಗಿದೆ. ಆ ಮಟ್ಟಕ್ಕೆ ಭಾರತೀಯ ಸಿನಿಮಾಗಳು ಮನ್ನಣೆ ಗಳಿಸಿವೆ ಎಂದಿದ್ದಾರೆ.
ಕೇನ್ಸ್ ಫಿಲ್ಮ್ ಫೆಸ್ಟಿವಲ್ ಮೇ 13ರಿಂದ ಆರಂಭಗೊಂಡಿದ್ದು, 24ರ ವರೆಗೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಭಾಗಿಯಾಗಲು ಫಿಲ್ಮ್ ಫೆಸ್ಟಿವಲ್ ಟೀಮ್ ಅಳೆದು ತೂಗಿ ಕೆಲವೇ ಕೆಲವು ತಾರೆಯರಿಗೆ ಮಾತ್ರ ಆಮಂತ್ರಣ ನೀಡುತ್ತದೆ.. ದೇಶ ವಿದೇಶದ ಕಲಾವಿದರಿಗೆ ಆಹ್ವಾನಿಸುತ್ತಾರೆ. ಈ ಕಾರ್ಯಕ್ರಮಕ್ಕೆ ನಟಿ ಪ್ರಣಿತಾ ಕೂಡ ಭಾಗಿಯಾಗಿದ್ದಾರೆ.
ಈ ಸಿನಿಮಾ ಹಬ್ಬದಲ್ಲಿ ಐಶ್ವರ್ಯಾ ರೈ, ಜಾನ್ವಿ ಕಪೂರ್, ಆದಿತಿ ರಾವ್ ಹೈದರಿ, ಕನ್ನಡದ ನಟಿ ದಿಶಾ ಮದನ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.