ಜಾಗೀರ್ದಾರ್*

ನಿವೇದಿತಾ ಶಿವರಾಜ್‌ ಕುಮಾರ್‌ ಮೊದಲ ಸಿನಿಮಾ ನಿರ್ಮಾಣ ಮಾಡಿರುವ ಫೈರ್‌ ಫ್ಲೈ  ಓಟಿಟಿ ಎಂಟ್ರಿ ಕೊಟ್ಟಿದೆ. ಏಪ್ರಿಲ್‌ 24ರಂದು ರಿಲೀಸ್‌ ಆಗಿದ್ದ  ಫೈರ್‌ ಫ್ಲೈ ಸಿನಿಮಾ ಈಗ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಸ್ಟ್ರೀಮಿಂಗ್‌ ಕಂಡಿದೆ. ಶ್ರೀಮುತ್ತು ಸಿನಿ ಸರ್ವೀಸ್ ಸಂಸ್ಥೆಯಡಿ ನಿವೇದಿತಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು.

ಫೈರ್‌ ಫ್ಲೈ ಸಿನಿಮಾವನ್ನು ವಂಶಿ ಕೃಷ್ಣ ನಟಿಸಿ, ನಿರ್ದೇಶಿಸಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಅಭಿನಯಿಸಿದ್ದರು. ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಲಾ ಬಿರಾದರ್, ಮೂಗು ಸುರೇಶ್ ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ಕಾಣಸಿಕೊಂಡಿದ್ದರು. ಚರಣ್ ರಾಜ್ ಅವರು ‘ಫೈರ್ ಫ್ಲೈ’ ಚಿತ್ರಕ್ಕೆ ಸಂಗೀತ ನೀಡಿದ್ದರು.

ಜಯರಾಮ್ ಶ್ರೀನಿವಾಸ್ ಹಾಗೂ ಹ್ಯಾಪಿ ಹನುಮಂತ್ ಅವರ ಸಹ- ನಿರ್ದೇಶನ ಈ ಚಿತ್ರಕ್ಕಿದೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣ, ರಘು ನಿಡುವಳ್ಳಿ ಅವರ ಸಂಭಾಷಣೆ, ಸುರೇಶ್ ಆರ್ಮುಗಮ್ ಅವರ ಸಂಕಲನ, ವರದರಾಜ್ ಕಾಮತ್ ಅವರ ಕಲೆ, ಅರ್ಜುನ್ ರಾಜ್ ಅವರ ಸಾಹಸ, ರಾಹುಲ್ ಮಾಸ್ಟರ್ ಅವರ ನೃತ್ಯ ಸಂಯೋಜನೆ ಫೈರ್ ಫ್ಲೈ ಚಿತ್ರಕ್ಕಿದೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ