ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಿಬ್ಬಂದಿ ಸೇರಿದಂತೆ 241 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್​ ತಲಾ ಒಂದು ಕೋಟಿ ರೂ. ಪರಿಹಾರ ಘೋಷಿಸಿದೆ. ವಿಮಾನ ಅಪಘಾತದಲ್ಲಿ ಬಹುತೇಕ ಪ್ರಯಾಣಿಕರು ಮೃತಪಟ್ಟಿದ್ದು, ಒಬ್ಬರು ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ಗುಜರಾತ್​ನ ಅಹಮದಾಬಾದ್​ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದೆ. ಅಹಮದಾಬಾದ್​ನಿಂದ ಲಂಡನ್​ಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಗುರುವಾರ (ಜೂ.12) ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು. ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಓರ್ವ ಪವಾಡ ಸದೃಶ್ಯವಾಗಿ ಬದುಕುಳಿದ್ದು, ಮತ್ತೆಲ್ಲರೂ ಮೃತಪಟ್ಟಿದ್ದಾರೆ.

ಈ ದುರಂತಕ್ಕೆ ಟಾಟಾ ಗ್ರೂಪ್​​ನ ಅಧ್ಯಕ್ಷ ಎನ್ ಚಂದ್ರಶೇಖರನ್​​​ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂತಾಪ ಸೂಚಿಸಿದ್ದಾರೆ. “ಈ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರೊಂದಿಗೆ ಇವೆ” ಎಂದು ಹೇಳಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ