ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್​ನ ಹಿರಿಯ​ ನಾಯಕಿ ಸೋನಿಯಾ ಗಾಂಧಿ ಅವರನ್ನು ಭಾನುವಾರ (ಜೂ.15) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

78 ವರ್ಷದ ಸೋನಿಯಾ ಗಾಂಧಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ಅವರನ್ನು ದೆಹಲಿಯ ಶ್ರೀಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.ಸೋನಿಯಾ ಗಾಂಧಿ ಕಳೆದ ವಾರ ಅಧಿಕ ರಕ್ತದೊತ್ತಡದಿಂದ ಶಿಮ್ಲಾದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ವರ್ಷದ ಫೆಬ್ರವರಿಯಲ್ಲಿ ಶ್ರೀಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿ ಚೇತರಿಸಿಕೊಂಡಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ