ಜಾಗೀರ್ದಾರ್* .
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹು ನಿರೀಕ್ಷಿತ “45” ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟೀಸರ್ ಜನರ ಮನ ಗೆದ್ದಿದೆ.
ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ 63 ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಶಿವರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಬೃಹತ್ ಗಾತ್ರದ ವಿಶೇಷ ಪೋಸ್ಟರ್ ಅನಾವರಣ ಮಾಡುವ ಮೂಲಕ “45” ಚಿತ್ರತಂಡ ಶಿವರಾಜಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ. ಶಿವಣ್ಣ ಅವರ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಚಿತ್ರೀಕರಣ ಪೂರ್ಣಗೊಂಡಿರುವ “45” ಚಿತ್ರ ಸಿಜಿ ವರ್ಕ್ ನಲ್ಲಿ ಬ್ಯುಸಿಯಾಗಿದೆ. ಸಾಕಷ್ಟು ವಿಶೇಷಗಳನ್ನೊಳಗೊಂಡಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.