– ರಾಘವೇಂದ್ರ ಅಡಿಗ ಎಚ್ಚೆನ್.
ಮಾಜಿ ಮಿಸ್ ಪುದುಚೇರಿ, ಖ್ಯಾತ ರೂಪದರ್ಶಿ ಸ್ಯಾನ್ ರೆಚಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

San-Rechal1

ಜುಲೈ 5ರಂದು ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸ್ಯಾನ್ ರೆಚಲ್ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

San-Rechal-Model-1

ಸ್ಯಾನ್ ರೆಚಲ್ ಮನರಂಜನಾ ಕ್ಷೇತ್ರದಲ್ಲಿ ʼಚರ್ಮದ ಬಣ್ಣʼದ ಆಧಾರದಲ್ಲಿ ತಾರತಮ್ಯ ಮತ್ತು ವರ್ಣಭೇದದ ವಿರುದ್ಧ ಸಾಕಷ್ಟು ಧ್ವನಿ ಎತ್ತಿದ್ದರು. ಅವರು 2022ರಲ್ಲಿ ಮಿಸ್ ಪುದುಚೇರಿ ಕಿರೀಟವನ್ನು ಪಡೆದರು. ಆರ್ಥಿಕ ಸಂಕಷ್ಟ ಮತ್ತು ವೈಯಕ್ತಿಕ ಒತ್ತಡದಿಂದ ಸ್ಯಾನ್ ರೆಚಲ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

San-Rechal

ಲಂಡನ್, ಜರ್ಮನಿ ಮತ್ತು ಫ್ರಾನ್ಸ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಡೆಲಿಂಗ್ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ರೆಚಲ್ ಮಹಿಳಾ ಸುರಕ್ಷತಾ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ