ಜಾಗೀರ್ದಾರ್*

“ಕಾಂತಾರ”ದಂತಹ ವಿಶ್ವಪ್ರಸಿದ್ದ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ “ಜಸ್ಟ್ ಮಾರೀಡ್” ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶೈನ್ ಶೆಟ್ಟಿ ಹಾಗೂ ಅಂಜಕಿ ಅಮರ್ ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರ ಆಗಸ್ಟ್ 22 ರಂದು ತೆರೆಗೆ ಬರುತ್ತಿದೆ. ಅನೇಕ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿರುವ ಹೆಸರಾಂತ ಸಿನಿಮಾ ವಿತರಣಾ ಸಂಸ್ಥೆಯಾದ ವಿ.ಕೆ ಫಿಲಂಸ್ ವಿಶಾಲ ಕರ್ನಾಟಕಕ್ಕೆ “ಜಸ್ಟ್ ಮ್ಯಾರೀಡ್” ಚಿತ್ರವನ್ನು ವಿತರಣೆ ಮಾಡಲಿದೆ. ಭಾರತದ ಹೆಸರಾಂತ ಹಾಗೂ ಅನುಭವಿ ಕಲಾವಿದರ ಹಾಗೂ ತಂತ್ರಜ್ಞರ ಸಮಾಗಮದಲ್ಲಿ ಮೂಡಿಬಂದಿರುವ “ಜಸ್ಟ್ ಮ್ಯಾರೀಡ್” ಚಿತ್ರವನ್ನು ತೆರೆಯ ಮೇಲೆ ನೋಡಲು ಕನ್ನಡ ಕಲಾಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ