ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ  ವಿ.ಸೋಮಣ್ಣ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ ಮಾಡಿ ಸೇಡಂ ಮಾರ್ಗವಾಗಿ ತೆರಳುವ ರೈಲುಗಳನ್ನು ಮಳಖೇಡ ರೋಡ್ (ಸ್ಟೇಷನ್) ಹಾಗೂ ಕುರುಕುಂಟಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೊಳಿಸುವಂತೆ ಮನವಿ ಸಲ್ಲಿಸಿದರು.

ಸೇಡಂ ತಾಲೂಕಿನ ಅತಿದೊಡ್ಡ ಪಂಚಾಯತ್ ಹೊಂದಿರುವ ಮಳಖೇಡ ರೋಡ್ ರೈಲ್ವೆ ನಿಲ್ದಾಣದಲ್ಲಿ ಹಾಗೂ ಕುರುಕುಂಟಾ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಕುರಿತಂತೆ ಮನವಿ ಸಲ್ಲಿಸಿದ  ನಂತರ ಸುದೀರ್ಘ ಚರ್ಚೆ ನಡೆಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ, ವಿ.ಸೋಮಣ್ಣ ಅವರೊಂದಿಗೆ ಉಭಯ ಕುಶಲೋಪರಿ ನಡೆಸಿದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ