ಜಾಗೀರ್ದಾರ್*

ಮಧು ಫಿಲಂ ಸರ್ಕ್ಯೂಟ್ಸ್ ಸಂಸ್ಥೆ ಲಾಂಛನದಲ್ಲಿ ಅಂಬಟಿ ಮಧು ಮೋಹನಕೃಷ್ಣ ಅವರು ಕನ್ನಡದಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ‌‌”ರೋಲೆಕ್ಸ್”.

ಈ ಹಿಂದೆ “ಬಿಲ್ ಗೇಟ್ಸ್” ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಸಿ.ಶ್ರೀನಿವಾಸ್ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ನಾಯಕನಾಗಿ ಕೋಮಲ್ ಕುಮಾರ್ ನಟಿಸುತ್ತಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಕೋಮಲ್ ಕುಮಾರ್ ಅವರು “ರೋಲೆಕ್ಸ್” ಚಿತ್ರದಲ್ಲಿ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

rolex 1

ಕಾಮಿಡಿಯೊಂದಿಗೆ ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಹಾಗೂ ಒಂದು ಹಾಡಿನ ಚಿತ್ರೀಕರಣ ಮುಕ್ತಾಯವಾಗಿದೆ‌. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಆ ಹಾಡುಗಳ ಚಿತ್ರೀಕರಣ ಮುಕ್ತಾಯವಾದರೆ, “ರೋಲೆಕ್ಸ್” ಚಿತ್ರದ ಚಿತ್ರೀಕರಣ ಸಂಪೂರ್ಣವಾಗುತ್ತದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಕೋಮಲ್ ಅವರು ಈ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್ ನಲ್ಲಿ “ರೋಲೆಕ್ಸ್” ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೋನಾಲ್ ಮೊಂತೆರೊ, ಅಚ್ಯುತಕುಮಾರ್, ನವೀನ್ ಪಡೀಲ್, ಅರುಣ ಬಾಲರಾಜ್ ಪ್ರಮುಖಪಾತ್ರದಲ್ಲಿ ನಟಿಸಿದ್ದು, ನಿರ್ಮಾಪಕರಾದ ಅಂಬಟಿ ಮಧು ಮೋಹನ್ ಕೃಷ್ಣ ಅವರು ಸಹ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಅವರ ಸಂಕಲನವಿರುವ “ರೋಲೆಕ್ಸ್” ಚಿತ್ರಕ್ಕೆ ಮುರಳಿಕೃಷ್ಣ ಅವರ ನಿರ್ಮಾಣ ನಿರ್ವಹಣೆ ಇದೆ. ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ