ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡದ ಹಿರಿಯ ನಿರ್ದೇಶಕ ಎಸ್ ಮುರಳಿ ಮೋಹನ್ ನಿಧನರಾಗಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಜೊತೆಗೆ ಶ್, ಓಂ ಚಿತ್ರಗಳಲ್ಲಿ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಮುರುಳಿ ಮೋಹನ್ ಅವರು ನಂತರ ಸ್ವತಂತ್ರವಾಗಿ ನಾಗರಹಾವು, ಸಂತ, ಮಲ್ಲಿಕಾರ್ಜುನ ಚಿತ್ರಗಳನ್ನು ನಿರ್ದೇಶಿಸಿದ್ದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮುರುಳಿ ಮೋಹನ್ ಅವರು​ ನಿಧನರಾಗಿದ್ದಾರೆ. ಬೆಂಗಳೂರಿನ ಜೆಸಿ ರಸ್ತೆಯಲ್ಲಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಮುರಳಿ ಮೋಹನ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಈ ಹಿಂದೆ ಶಸ್ತ್ರಚಿಕಿತ್ಸೆಗೆ ಅನುದಾನದ ಅವಶ್ಯಕತೆಯಿದೆ ಎಂದು ಹೇಳಿಕೊಂಡಿದ್ದರು. ಐದಾರು ವರ್ಷಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅವರ ಶಸ್ತ್ರಚಿಕಿತ್ಸೆಗೆ 30ರಿಂದ 35 ಲಕ್ಷ ರೂಪಾಯಿ ರೂಪಾಯಿ ಬೇಕಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಬುಧವಾರ (ಆ.13) ನಿರ್ದೇಶಕ ಮುರಳಿ ಮೋಹನ್ ಅವರು ಮೃತರಾಗಿದ್ದಾರೆ. ಅವರ ನಿಧನಕ್ಕೆ ಆಪ್ತರು, ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ