ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಹೋಗಿದ್ದು ಅಲ್ಲಿ ವಿಚಾರಣೆ ನಡೆದಿತ್ತು. ಸದ್ಯ ಇದೀಗ ಸುಪ್ರೀಂ ಕೋರ್ಟ್​ ತೀರ್ಪು ನೀಡಿದ್ದು ನಟ ದರ್ಶನ್​ಗೆ ಜಾಮೀನು ರದ್ದು ಮಾಡಿದೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ 7 ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ನೀಡಿತ್ತು. ಸದ್ಯ ಇದನ್ನು ಪ್ರಶ್ನಿಸಿ ಸರ್ಕಾರ, ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿತ್ತು.

ಇಂದು ಸುಪ್ರೀಂ ಕೋರ್ಟ್​​ನಲ್ಲಿ ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್, ಪವಿತ್ರಾಗೌಡ ಹಾಗೂ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರದ ಅರ್ಜಿಯ ಆದೇಶ ಹೊರ ಬಿದ್ದಿದೆ. ಹೈಕೋರ್ಟ್​ ತೀರ್ಪಿನಲ್ಲಿ ದೋಷವಿದೆ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜೆ.ಬಿ ಪರ್ದಿವಾಲ ಹಾಗೂ ನ್ಯಾಯಾಮೂರ್ತಿ ಮಹಾದೇವನ್ ಪೀಠ ತೀರ್ಪು ನೀಡಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ