ಸರಸ್ವತಿ ಜಾಗೀರ್ದಾರ್ *

ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್.ಓ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ಅವರು ಚೊಚ್ಚಲ ಬಾರಿಗೆ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ “ಮರಳಿ ಮನಸಾಗಿದೆ” ಚಿತ್ರಕ್ಕಾಗಿ ಹೆಸರಾಂತ ಸಾಹಿತಿ ಕೆ.ಕಲ್ಯಾಣ್ ಅವರು ಬರೆದಿರುವ “ಓಡುವ ನದಿಗೆ” ಎಂಬ ಹಾಡನ್ನು ಇತ್ತೀಚೆಗೆ ಕನ್ನಡದ ಜನಪ್ರಿಯ ನಟಿ ಪ್ರೇಮ ಅವರು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಅನುರಾಧ ಭಟ್ ಅವರು ಈ ಸಮಧುರ ಗೀತೆಯನ್ನು ಹಾಡಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ‌. ಇದು ಚಿತ್ರದ ನಾಲ್ಕನೇ ಹಾಗೂ ಕೊನೆಯ ಹಾಡಾಗಿದೆ. ಈವರೆಗೂ ಬಿಡುಗಡೆಯಾಗಿರುವ ಚಿತ್ರದ ಮೂರು ಹಾಡುಗಳು ಕೂಡ ಜನಮನಸೂರೆಗೊಂಡಿದೆ. ಪ್ರಸ್ತುತ A2 ಮ್ಯೂಸಿಕ್ ನಲ್ಲಿ ಬಿಡುಗಡೆಯಾಗಿರುವ “ಓಡುವ ನದಿ” ಹಾಡಿಗೂ ಸಹ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಚಿತ್ರದ ನಾಲ್ಕು ಹಾಡುಗಳು a2 music ಮೂಲಕ ಬಿಡುಗಡೆಯಾಗಿದೆ.

manasu

ಯುವಜನತೆಗೆ ಹತ್ತಿರವಾದ ಚಿತ್ರದ ಜೊತೆಗೆ ಸಂಬಂಧಗಳ ಮೌಲ್ಯಗಳನ್ನು‌ ತಿಳಿಸುವ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಅಂತಿಮ ಹಂತದಲ್ಲಿದೆ. ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ.

ನಿರ್ದೇಶಕ ನಾಗರಾಜ್ ಶಂಕರ್ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಸಂಭಾಷಣೆ ಬರೆದಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ. ಹಾಲೇಶ್ ಎಸ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಅಲ್ಟಿಮೇಟ್ ಶಿವು ಸಾಹಸ ನಿರ್ದೇಶನ, ಆಶಿತ್ ಸುಬ್ರಹ್ಮಣ್ಯ ಸಹ ನಿರ್ದೇಶನ ಹಾಗೂ ವಿಜಯ್ ಕುಮಾರ್ ಅವರ ನಿರ್ಮಾಣ ಮೇಲ್ವಿಚಾರಣೆ “ಮರಳಿ ಮನಸಾಗಿದೆ” ಚಿತ್ರಕ್ಕಿದೆ.

ಅರ್ಜುನ್ ವೇದಾಂತ್, ನಿರೀಕ್ಷಾ ಶೆಟ್ಟಿ, ಸ್ಮೃತಿ ವೆಂಕಟೇಶ್, ಟಿ. ಎಸ್. ನಾಗಭರಣ, ಸ್ವಾತಿ, ಸಂಗೀತ, ಮಾನಸಿ ಸುಧೀರ್, ಭೋಜರಾಜ್ ವಾಮಂಜೂರ್, ಸೀರುಂಡೆ ರಘು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ