ಒಂದು ಕಾಲದಲ್ಲಿ ಭಾರತ ಕ್ರಿಕೆಟ್‌ ತಂಡವನ್ನು ಮುನ್ನಡೆಸಿದ್ದ ಮೊಹಮ್ಮದ್​ ಅಜರುದ್ದೀನ್​ ಇದೀಗ ರಾಜಕೀಯ ಕ್ಷೇತ್ರದಲ್ಲಿ ಹೊಸ ಇನ್ನಿಂಗ್ಸ್​ ಪ್ರಾರಂಭಿಸಲು ಮುಂದಾಗಿದ್ದಾರೆ. ಹೌದು, ಟೀಮ್​ ಇಂಡಿಯಾದ ಮಾಜಿ ನಾಯಕ ಮತ್ತು ತೆಲಂಗಾಣ ಎಂಎಲ್​ಸಿ ಅಜರುದ್ದೀನ್ ಅವರಿಗೆ ರಾಜ್ಯಪಾಲರ ಕೋಟಾದಡಿ ಸಚಿವ ಸ್ಥಾನ ನೀಡಲಾಗಿದೆ.

ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ​, ಸಚಿವ ಸಂಪುಟ ವಿಸ್ತರಣೆ ಮಾಡುವ ಕುರಿತು ಭಾರೀ ಚರ್ಚೆ ನಡೆಸಿತ್ತು. ಸಂಪುಟದಲ್ಲಿ 15 ಖಾತೆಗಳು ಭರ್ತಿಯಾಗಿದ್ದು, ಖಾಲಿ ಇರುವ ಮೂರು ಖಾತೆಗಳನ್ನು ತುಂಬಲು ಮುಂದಾಗಿತ್ತು.

ಅಜರುದ್ದೀನ್ ಶುಕ್ರವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್​ ಮೂಲಗಳು ತಿಳಿಸಿವೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಜುಬಿಲಿ ಹಿಲ್ಸ್ ವಿಧಾನಸಭಾ ಸ್ಥಾನದಿಂದ ಸ್ಪರ್ಧಿಸಿದ್ದ ಅಜರುದ್ದೀನ್ ಸೋಲು ಅನುಭವಿಸಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ