ರಾಘವೇಂದ್ರ ಅಡಿಗ ಎಚ್ಚೆನ್.

ಪಿಸ್ತೂಲ್:.ಹೀಗೊಂದು ಹೆಸರಿನಲ್ಲಿ ಕನ್ನಡದ ಸಿನಿಮಾವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಪ್ರಬೀಕ್ ಮೊಗವೀರ್, ಈ ಬಾರಿ ‘ಪಿಸ್ತೂಲ್’ ಎಂಬ ಈ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರ ಮುಂದೆ ಹೇಳಲು ತಯಾರಿ ಮಾಡಿಕೊಂಡಿದ್ದಾರೆ.

release 1

ಆತ್ಮ ಸಿನಿಮಾಸ್ ಬ್ಯಾನರಿನಲ್ಲಿ ಪ್ರಬೀಕ್ ಮೊಗವೀರ್ ಕಥೆ, ಚಿತ್ರಕಥೆ ಬರೆದು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ವೇದ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆ ಪಿಸ್ತೂಲ್ ಸಿನಿಮಾದ ಸ್ಕ್ರಿಪ್ಟ್ ಮತ್ತು ಪ್ರೀ-ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಪಿಸ್ತೂಲ್ ಚಿತ್ರದ ಟೈಟಲ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ನಟ ವಸಿಷ್ಠ ಎನ್. ಸಿಂಹ ಪಿಸ್ತೂಲ್ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇದೇ ವೇಳೆ ಮಾತನಾಡಿದ ನಟ ವಸಿಷ್ಠ ಎನ್. ಸಿಂಹ, ‘ಈ ಸಿನಿಮಾದ ಹೆಸರು ಮತ್ತು ಪೋಸ್ಟರ್ ಎರಡೂ ಸಾಕಷ್ಟು ಕುತೂಹಲ ಮೂಡಿಸುವಂತಿದೆ. ಸಿನಿಮಾದಲ್ಲಿ ತಂಡ ಹೊಸಥರದ ವಿಷಯವನ್ನು ಆಡಿಯನ್ಸ್ ಮುಂದೆ ಹೇಳಲು ಹೊರಟಿರುವುದು ಕಾಣುತ್ತದೆ. ಚಿತ್ರತಂಡ ಹೇಳಿದ ಕಥೆಯ ಎಳೆ ಕೂಡ ಚೆನ್ನಾಗಿದೆ. ಕನ್ನಡದಲ್ಲಿ ಇಂಥ ಹೊಸ ಕಥಾಹಂದರದ ಸಿನಿಮಾಗಳು ನಿರಂತರವಾಗಿ ಬರುತ್ತಿರಬೇಕು. ಸಿನಿಮಾದ ಟೈಟಲ್ ಪೋಸ್ಟರ್‌ನಲ್ಲಿ ಇರುವಂಥ ಕುತೂಹಲ ಸಿನಿಮಾದಲ್ಲೂ ಇರಬಹುದು ಎಂಬ ನಿರೀಕ್ಷೆಯಿದೆ. ‘ಪಿಸ್ತೂಲ್’ ಚಿತ್ರತಂಡದಿಂದ ಒಳ್ಳೆಯ ಸಿನಿಮಾ ಹೊರಬರಲಿ’ ಎಂದು ಚಿತ್ರದ ಬಗ್ಗೆ ಭರವಸೆಯ ಮಾತುಗಳನ್ನಾಡಿದ್ದಾರೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ