ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಎಟಿಎಂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ನಾಲ್ವರನ್ನು ಬಂಧಿಸಿ, ಅವರಿಂದ ಸುಮಾರು 5.76 ಕೋಟಿ ಹಣ ಸೀಜ್ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದಿದ್ದ ಎಟಿಎಂ ಹಣ ಸಾಗಾಟ ವೇಳೆ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಒಟ್ಟು 8 ಜನರ ಗುಂಪಿನಿಂದ ಕೃತ್ಯ ನಡೆದಿದೆ. ಸದ್ಯ 3 ಆರೋಪಿಗಳನ್ನು ಬಂಧಿಸಲಾಗಿದೆ. 5.76 ಕೋಟಿ ಹಣ ಸೀಜ್ ಮಾಡಲಾಗಿದೆ. ಒಟ್ಟು 8 ಜನರ ಗುಂಪಿನಿಂದ ಕೃತ್ಯ ನಡೆದಿದೆ. 30 ತಾಸು ತಡವಾಗಿ ಮಾಹಿತಿ ಬಂದಿದೆ. ಮೊದಲು ಡಿಜೆ ಹಳ್ಳಿಯಲ್ಲಿ ಆಗಿದೆ ಎಂಬ ಮಾಹಿತಿ ಬಂದಿತ್ತು. ಘಟನೆ ನಡೆದ ಒಂದೂವರೆ ಗಂಟೆಯ ಬಳಿಕ ಮಾಹಿತಿ ನೀಡಿದ್ದಾರೆ. ತಕ್ಷಣವೇ ಎಲ್ಲಾ ಭಾಗಗಳಲ್ಲಿ ನಾಕಾಬಂಧಿ ಹಾಕಲಾಗಿತ್ತು. ದರೋಡೆಕೋರರು ಮೊಬೈಲ್ ಬಳಸುತ್ತಿರಲಿಲ್ಲ. ಸಿಸಿಟಿವಿ ಕಾಣದ ಸ್ಥಳಗಳಲ್ಲಿ ವಾಹನ ನಿಲ್ಲಿಸಿದ್ದರು. ತನಿಖೆಯ ದಾರಿ ತಪ್ಪಿಸಲು ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಿದ್ದಾರೆ. ಘಟನೆ ನಡೆದ ದಿನ ಹಣ ತೆಗೆದುಕೊಂಡು ಹೋದ ವಾಹನ ಹಿಡಿಯಲಿಕ್ಕೆ ಆಗಲಿಲ್ಲ. ಅನೇಕ ವಾಹನಗಳನ್ನು ಬಳಸಿದ್ದಾರೆ. ವಾಹನಗಳ ನಂಬರ್ ಪದೇ ಪದೇ ಬದಲಿಸಿದ್ದಾರೆ ಎಂದು ಮಾಹಿತಿ ನೀಡಿದರು.
ತನಿಖೆಗೆ 11 ತಂಡ ರಚನೆ: ಇದೇ ವೇಳೆ 5 ರಾಜ್ಯಗಳಲ್ಲಿ ಶೋಧ ನಡೆಸಲಾಗಿದ್ದು, ತನಿಖೆಗೆ ಒಟ್ಟು 11 ತಂಡಗಳನ್ನು ರಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮೊದಲ 24 ಗಂಟೆಗಳ ಅಂತ್ಯದ ವೇಳೆಗೆ, ಆರೋಪಿಗಳು ಮತ್ತು ಬಳಸಿದ ವಾಹನಗಳನ್ನು ನಿರ್ದಿಷ್ಟ ಮಾಹಿತಿಯ ಮೂಲಕ ಗುರುತಿಸಲಾಯಿತು.
ಇದು ಅವರ ಬಂಧನಕ್ಕೆ ಕಾರಣವಾಯಿತು. ಆರ್‌ಬಿಐ ಅಧಿಕಾರಿಗಳಂತೆ ನಟಿಸಿದ ಗ್ಯಾಂಗ್ ಹಣದೊಂದಿಗೆ ಪರಾರಿಯಾಗಿದ್ದರು. ಇದುವರೆಗೆ 5.76 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ ಮತ್ತು ಉಳಿದ ಹಣವನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.
ಆರೋಪಿಗಳು ಸಿಸಿಟಿವಿ ಇಲ್ಲದ ಕಡೆ ಓಡಾಡಿದ್ದಾರೆ. ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಗೋವಾದಲ್ಲಿ ಆರೋಪಿಗಳನ್ನು ಹುಡುಕಾಟ ನಡೆಸಿದ್ದಾರೆ. ಇನ್ನೂ ಹಣ ರಿಕವರಿ ಆಗಬೇಕು. 200 ಸ್ಟಾಪ್ ಬಳಕೆ ಮಾಡಲಾಗಿದೆ. 30 ಕ್ಕೂ ಹೆಚ್ಚು ಮಂದಿಯನ್ನ ವಿಚಾರಣೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
ಸಂಚಿಗೆ 3 ತಿಂಗಳಿಂದ ಪ್ಲಾನಿಂಗ್: ಗೋವಿಂದಪುರ ಪೇದೆ ಸೇರಿ ಮೂವರ ಬಂಧನವಾಗಿದೆ. ಗೋಪಿ, ಕ್ಸೇವಿಯರ್, ಅಣ್ಣಪ್ಪನಾಯ್ಕ ಬಂಧಿತ ಆರೋಪಿಗಳು. ತಾಂತ್ರಿಕ ಮಾಹಿತಿ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದು ಬಂಧಿಸಲಾಗಿದೆ.
ಒಂದು ಇನ್ನೋವಾ ಚಿತ್ತೂರಿನಲ್ಲಿ ಸಿಕ್ಕಿತ್ತು. ಬೆಂಗಳೂರಿನ ಹೊರ ಭಾಗದಲ್ಲಿ ಹಣ ರಿಕವರಿ ಮಾಡಲಾಗಿದೆ. ಅಪರಾಧಿಗಳನ್ನು ಪತ್ತೆಹಚ್ಚಲು ದಕ್ಷಿಣದ ಎಲ್ಲಾ ರಾಜ್ಯಗಳು ಮತ್ತು ಗೋವಾಕ್ಕೆ ಆರು ತಂಡಗಳನ್ನು ಕಳುಹಿಸಲಾಗಿದೆ ಎಂದು ತಿಳಿಸಿದರು.
ದರೋಡೆಕೋರರಿಗೆ ಶಿಕ್ಷೆ ಕೊಡಿಸುವ ನಿಟ್ಡಿನಲ್ಲಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣವನ್ನು ಪ್ರತಿಷ್ಠೆಯಾಗಿ ತಗೆದುಕೊಂಡು ಕೆಲಸ ಮಾಡಲಾಗಿದೆ. ಸಿಸಿಬಿ ಡಿಸಿಪಿ, ದಕ್ಷಿಣ ವಿಭಾಗದ ಡಿಸಿಪಿ ಹಾಗೂ ಇಬ್ಬರು ಜಂಟಿ ಪೊಲೀಸ್ ಆಯುಕ್ತರಿಂದ ಕಾರ್ಯಚರಣೆ ಮಾಡಲಾಗಿದೆ.
3 ತಿಂಗಳಿಂದ ಪ್ಲಾನಿಂಗ್ ಮಾಡಿದ್ದಾರೆ. 15 ದಿನದಿಂದ ರೇಖಿ ಮಾಡಿದ್ದು, ಸಿಸಿಟಿವಿ ಇಲ್ಲದೇ ಇರೋ ಜಾಗವನ್ನು ನೋಡಿಕೊಂಡು ದಾಳಿ ಮಾಡಿದ್ದಾರೆ. ಸಿಎಂಎಸ್ ಕಂಪನಿಯ ಲೋಪವೂ ಇದೆ. ಸಿಎಂಎಸ್ ಕಂಪನಿಯು ರೂಲ್ಸ್ ವೈಲೇಷನ್ ಮಾಡಿದ್ದಾರೆ. ವೆಹಿಕಲ್ ಇನ್‌ಚಾರ್ಜ್ ಶಾಮೀಲಾಗಿ ಕೃತ್ಯ ಎಸಗಿದ್ದಾರೆ. ವಾಹನದ ಚಾಲಕ ಹೊರಗುತ್ತಿಗೆ ಡ್ರೈವರ್ ಆಗಿದ್ದ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.





