ಬಾಂಬ್ ಬೆದರಿಕೆ ಬಂದ ಕಾರಣ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಷ ಮಾಡಬೇಕಾಯಿತು.
ವಿಮಾನವನ್ನು ಮುಂಬೈ ನಿಲ್ದಾಣದಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್ ನಲ್ಲಿ ವಿಮಾನ ಲ್ಯಾಂಡಿಂಗ್ ಆದಾಗ ರಿಮೋಟ್ ಕಂಟ್ರೋಲ್ ನಿಯಂತ್ರಿತ ಸ್ಫೋಟಕ ಸಾಧನಗಳನ್ನು ಬಳಸಿ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಅನಾಮದೇಯ ಶಕ್ತಿಗಳು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆಯ ಇಮೇಲ್ ಕಳುಹಿಸಿದ್ದವು.
ಇ-ಮೇಲ್ ಬಂದ ಬಳಿಕ ಕುವೈತ್ ಗೆ ತೆರಳುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲು ಅಧಿಕಾರಿಗಳು ನಿರ್ಧರಿಸಿದರು. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು,ಆದರೆ ಭದ್ರತಾ ಪರಿಶೀಲನೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





