– ರಾಘವೇಂದ್ರ ಅಡಿಗ ಎಚ್ಚೆನ್.
ಸಿನಿಮಾ ಚಿತ್ತೀಕರಣ ವೇಳೆಯಲ್ಲಿ ಸ್ಯಾಂಡಲ್ವುಡ್ ನಿರ್ದೇಶಕ ಸಂಗೀತ್ ಸಾಗರ್ (55) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಅವರು ಬೆಂಗಳೂರಿನ ಅತ್ತಿಗುಪ್ಪೆ ನಿವಾಸಿಯಾಗಿದ್ದರು. ಹರಿಹರಪುರದಲ್ಲಿ ಸಿನಿಮಾ ಚಿತ್ತೀಕರಣದ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ‘ಪಾತ್ರಧಾರಿ’ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದಾಗ ಹೃದಯಾಘಾತ ಸಂಭವಿಸಿದೆ. ‘ಪಾತ್ರಧಾರಿ’ ಸಿನಿಮಾದ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕರಾಗಿದ್ದರು. ಅವರು ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ದೊಡ್ಡನಾಗರ ಮೂಲದವರಾಗಿದ್ದಾರೆ.
20 ದಿನದಿಂದ ಹರಿಹರಪುರ ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿತ್ತು. ಮಧ್ಯಾಹ್ನದ ವೇಳೆ ಊಟದ ಬಿಡುವಿನ ವೇಳೆ ತಲೆ ಸುತ್ತಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಕೊಪ್ಪದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ತಕ್ಷಣ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ ಎಂದು ಪಾತ್ರಧಾರಿ ಚಲನಚಿತ್ರದ ನಟ ಸಂಜುಬಸಯ್ಯ ಮಾಹಿತಿ ನೀಡಿದ್ದಾರೆ





