ರಾಘವೇಂದ್ರ ಅಡಿಗ ಎಚ್ಚೆನ್.

ಜೋಗಿ ಪ್ರೇಮ್ ನಿರ್ದೇಶನದ ಬಹು ನಿರೀಕ್ಷಿತ ‘ಕೆಡಿ’ ಸಿನಿಮಾ ಇದೀಗ ಅಧಿಕೃತವಾಗಿ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಚಿತ್ರದ ‘ಅಣ್ತಮ್ಮ ಜೋಡೆತ್ತು ಕಣೋ..’ ಹಾಡನ್ನು ಬಿಡುಗಡೆ ಮಾಡುವ ಮೂಲಕ ಪ್ರೇಮ್ ಅವರು ಚಿತ್ರದ ರಿಲೀಸ್ ಡೇಯನ್ನು ಬಹಿರಂಗಪಡಿಸಿದ್ದಾರೆ.

jogi1

‘ಕೆಡಿ’ ಸಿನಿಮಾ 2026ರ ಏಪ್ರಿಲ್ 30ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ‘ಮಾರ್ಟಿನ್’ ಚಿತ್ರದ ಬಳಿಕ ಧ್ರುವ ಸರ್ಜಾ ನಟನೆಯಾಗಿ ಬಿಡುಗಡೆಯಾಗುತ್ತಿರುವ ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಇದೆ. ಸಾಕಷ್ಟು ಸಮಯದಿಂದ ಚಿತ್ರೀಕರಣ ಹಂತದಲ್ಲಿರುವ ಈ ಚಿತ್ರಕ್ಕೆ ಜೋಗಿ ಪ್ರೇಮ್ ಅವರು ವಿಶೇಷ ಕಾಳಜಿ ವಹಿಸಿ ಕೆಲಸ ಮಾಡುತ್ತಿದ್ದಾರೆ.
ಮಾರ್ಚ್ ತಿಂಗಳಲ್ಲಿ ಹಲವು ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆಯಾಗುವ ಸಾಧ್ಯತೆ ಇದ್ದರೂ, ಏಪ್ರಿಲ್ ವೇಳೆಗೆ ‘ಕೆಡಿ’ಗೆ ದೊಡ್ಡ ಮಟ್ಟದ ಕ್ಲ್ಯಾಶ್ ಎದುರಾಗುವ ಲಕ್ಷಣಗಳು ಇಲ್ಲ. ಐಪಿಎಲ್ ಪಂದ್ಯಾವಳಿ ಕೆಲ ಮಟ್ಟಿಗೆ ಸ್ಪರ್ಧೆ ನೀಡಬಹುದಾದರೂ, ಶಾಲಾ ಮಕ್ಕಳಿಗೆ ರಜೆ ಇರುವುದರಿಂದ ಸಿನಿಮಾ ಗಳಿಕೆಗೆ ಸಹಕಾರ ಸಿಗುವ ನಿರೀಕ್ಷೆ ಇದೆ.

jogi

ಇತ್ತೀಚೆಗೆ ಬಿಡುಗಡೆಯಾದ ‘ಅಣ್ತಮ್ಮ ಜೋಡೆತ್ತು ಕಣೋ..’ ಹಾಡಿಗೆ ಜೋಗಿ ಪ್ರೇಮ್ ಅವರೇ ಧ್ವನಿ ನೀಡಿದ್ದಾರೆ. ಬಿಎಸ್ ಮಂಜುನಾಥ್ ಸಾಹಿತ್ಯ ಬರೆದಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿನಲ್ಲಿ ಧ್ರುವ ಸರ್ಜಾ, ರಮೇಶ್ ಅರವಿಂದ್ ಹಾಗೂ ಸಂಜಯ್ ದತ್ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಗೆಳೆತನದ ಕುರಿತಾದ ಈ ಗೀತೆ ಈಗಾಗಲೇ ಗಮನ ಸೆಳೆಯುತ್ತಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ