– ರಾಘವೇಂದ್ರ ಅಡಿಗ ಎಚ್ಚೆನ್.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ. ಇದೀಗ ಚಿತ್ರತಂಡ ಪಾತ್ರಗಳ ಪರಿಚಯವನ್ನು ಒಂದೊಂದಾಗಿಯೇ ಮಾಡ್ತಿದೆ.
ಇತ್ತೀಚೆಗಷ್ಟೇ ಕಿಯಾರ ಅಡ್ವಾಣಿ ಪಾತ್ರದ ಫಸ್ಟ್ ಲುಕ್ ಬಿಡುಗಡೆ ಆಗಿತ್ತು.. ಇದೀಗ ಹುಮಾ ಖುರೇಷಿ ಲುಕ್ ಬಿಡುಗಡೆ ಮಾಡಲಾಗಿದೆ. ಸದ್ಯ ಹುಮಾ ಖುರೇಷಿ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಎಲಿಜಬೆತ್ ಎಂಬ ಪಾತ್ರ ಮಾಡುತ್ತಿದ್ದಾರೆ

ಇನ್ನೂ ಇದೇ ಸಿನಿಮಾದಲ್ಲಿ ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ನಟಿಸ್ತಿದ್ದು, ಸಿನಿಮಾದ ಶೂಟಿಂಗ್ ಅನುಭವ ಬಿಚ್ಚಿಟ್ಟಿದ್ದಾರೆ. ಟಾಕ್ಸಿಕ್ ಚಿತ್ರತಂಡದ ವರ್ಕಿಂಗ್ ಸ್ಟೈಲ್ ತುಂಬಾ ಭಿನ್ನವಾಗಿದೆ. ಯಶ್ ಮತ್ತು ಗೀತು ಇಬ್ಬರೂ ಸಿನಿಮಾವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗ್ತಿದ್ದಾರೆ. ಸಿನಿಮಾದ ಕಥೆ, ಚಿತ್ರೀಕರಣ ರೀತಿ ಎಲ್ಲವೂ ದೊಡ್ಡ ಅನುಭವ ನೀಡುತ್ತಿವೆ ಅಂತಾ ತಿಳಿಸಿದ್ದಾರೆ.

ಗೀತು ಮೋಹನ್ದಾಸ್ ನಿರ್ದೇಶನದ ಚಿತ್ರ ಇದಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಏಕಕಾಲಕ್ಕೆ ‘ಟಾಕ್ಸಿಕ್’ ಸಿನಿಮಾ ಸಿದ್ಧವಾಗುತ್ತಿದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಗಳಿಗೆ ಡಬ್ ಆಗುತ್ತಿದೆ.





