ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿದ್ದ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ನಾಯಕಿ ಬೇಗಂ ಖಲೇದಾ ಜಿಯಾ ಮಂಗಳವಾರ ನಿಧನರಾಗಿದ್ದಾರೆ.

ಖಲೇದಾ ಜಿಯಾ ಅವರು ಲಿವರ್ ಸಿರೋಸಿಸ್, ಸಂಧಿವಾತ, ಮಧುಮೇಹ ಹಾಗೂ ಹೃದಯಕ್ಕೆ ಸಂಬಂಧಿಸಿದ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ವಯೋಸಹಜ ಕಾಯಿಲೆಗಳ ತೀವ್ರತೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಖಲೇದಾ ಜಿಯಾ ಅವರ ನಿಧನವನ್ನು ಖಚಿತಪಡಿಸಿದೆ.

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಖಲೇದಾ ಜಿಯಾ ಅವರು ನವೆಂಬರ್ 23ರಂದು ಢಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಗಂಭೀರವಾಗುತ್ತಿದ್ದಂತೆ ಅವರಿಗೆ ವೆಂಟಿಲೇಟರ್ ಸಹಾಯ ಒದಗಿಸಲಾಗಿತ್ತು. ದಿನ ಕಳೆದಂತೆ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷಿಣಿಸಿದ್ದರಿಂದ, ಬದುಕುಳಿಯುವುದು ಕಷ್ಟ ಎನ್ನಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಖಲೇದಾ ಜಿಯಾ 1991–1996 ಹಾಗೂ 2001–2006ರ ಅವಧಿಯಲ್ಲಿ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು. ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಅವರು ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಶೇಖ್ ಹಸೀನಾ ಅವರ ಪ್ರಮುಖ ರಾಜಕೀಯ ಪ್ರತಿಸ್ಪರ್ಧಿಯೂ ಆಗಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ