ಸರಸ್ವತಿ*
“ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ,ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ,ಸಮೀಕ್ಷಾ,ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್,ಗಿರೀಶ್ ಹೆಗ್ಡೆ,ಯಶ್ ಶೆಟ್ಟಿ,ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್,ಸೂರ್ಯ ಕುಂದಾಪುರ,ಮೈಕೋ

ನಾಗರಾಜ್,ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.





