ರಾಘವೇಂದ್ರ ಅಡಿಗ ಎಚ್ಚೆನ್.

ನಟ ದರ್ಶನ್ ತೂಗುದೀಪ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಸಂದೇಶಗಳು ಹಾಗೂ ಅವಾಚ್ಯ ಕಮೆಂಟ್‌ಗಳನ್ನು ಕಳುಹಿಸಿದ್ದ ಪ್ರಕರಣದಲ್ಲಿ ಪೊಲೀಸರು ಇನ್ನೂ ಮೂವರು ಆರೋಪಿಗಳನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸುತ್ತಿದ್ದಾರೆ.
ಡಿಸೆಂಬರ್ ತಿಂಗಳಲ್ಲಿ ವಿಜಯಲಕ್ಷ್ಮಿ ಅವರು ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲಿಂಗ್, ಅಶ್ಲೀಲ ಸಂದೇಶ ಹಾಗೂ ಅವಮಾನಕಾರಿ ಕಮೆಂಟ್‌ಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರನ್ನು ಭೇಟಿ ಮಾಡಿ ಮೌಖಿಕವಾಗಿ ದೂರು ತಿಳಿಸಿದ್ದರು.

sandesh 1

ಈ ಮೊದಲು ದಾವಣಗೆರೆಯ ಇಂಜಿನಿಯರ್ ನಿತಿನ್, ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು, ಹುಬ್ಬಳ್ಳಿ ಪೆಟ್ರೋಲ್ ಬಂಕ್ ಮ್ಯಾನೇಜರ್ ನಾಗರಾಜ್ ತಳವಾರ್, ಧಾರವಾಡದ ಆಡಿಟರ್ ಪ್ರಶಾಂತ್ ತಳವಾರ್ ಸೇರಿದಂತೆ ಐವರು ಬಂಧಿತರಾಗಿದ್ದರು. ಇದೀಗ ಇನ್ನೂ ಮೂವರು ಬಂಧಿತರಾಗಿದ್ದು, ತಾಂತ್ರಿಕ ಸಾಕ್ಷ್ಯ ಸಂಗ್ರಹ ಕಾರ್ಯ ಮುಂದುವರೆದಿದೆ.
ವಿಜಯಲಕ್ಷ್ಮಿ ಅವರು ಒಟ್ಟು 15 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ದೂರು ದಾಖಲಿಸಿ, ಸುಮಾರು 150 ಸ್ಕ್ರೀನ್‌ಶಾಟ್‌ಗಳನ್ನು ಪೊಲೀಸರಿಗೆ ಸಲ್ಲಿಸಿದ್ದರು. ಸಾಕ್ಷ್ಯಗಳ ಪರಿಶೀಲನೆ ಬಳಿಕ ಎಲ್ಲ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ