– ರಾಘವೇಂದ್ರ ಅಡಿಗ ಎಚ್ಚೆನ್.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಇಂದು ಚುನಾವಣೆ ನಡೆದಿದ್ದು, ನಟಿ ಜಯಮಾಲ ಗೆಲುವು ಸಾಧಿಸಿದ್ದಾರೆ.
ಗುರುರಾಜ ಕಲ್ಯಾಣ ಮಂಟಪದಲ್ಲಿ ಈ ಚುನಾವಣೆ ನಡೆಯಿತು. ಈ ಭಾರಿಯ ಫಿಲ್ಮ್ ಚೇಂಬರ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಟಿ ಜಯಮಾಲಾ ಹಾಗೂ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ 512 ಮತ ಪಡೆದು ಜಯಮಾಲಾ ಜಯಗಳಿಸಿದ್ದಾರೆ.
ಶನಿವಾರ(ಜ.31) ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ 2026–27ನೇ ಸಾಲಿನ ವಾರ್ಷಿಕ ಚುನಾವಣೆ ನಡೆಯಿತು. ಈ ಬಾರಿಯ ಅಧ್ಯಕ್ಷ ಸ್ಥಾನ ನಿರ್ಮಾಪಕರ ವಲಯಕ್ಕೆ ಮೀಸಲಾಗಿತ್ತು.

images (1) (1)

ಈಗಾಗಲೇ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ನಟಿ ಜಯಮಾಲಾ ಹಾಗೂ ನಿರ್ಮಾಪಕ ಭಾ.ಮಾ.ಹರೀಶ್‌ ಅವರು ಈ ವರ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಯಲ್ಲಿದ್ದರು. ಒಟ್ಟು 846 ಮತಗಳು ಚಲಾವಣೆಯಾಗಿದ್ದು, ಜಯಮಾಲಾ ಅವರು 512 ಮತಗಳನ್ನು ಪಡೆದುಕೊಂಡರು.
ಈ ಹಿಂದೆ 2008 ರಿಂದ 2010 ವರೆಗೆ ಜಯಮಾಲಾ ಪ್ರಥಮ ಬಾರಿಗೆ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದರು. ಇದೀಗ 2026ರಿಂದ 2028ರ ಸಾಲಿನ ವರೆಗೆ ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷರಾಗಿ ಜಯಮಾಲಾ ಪದಗ್ರಹಣ ಮಾಡಿದ್ದಾರೆ. 2008ರಲ್ಲಿ ಅಧ್ಯಕ್ಷರಾಗಿದ್ದ ಜಯಮಾಲಾ ವಾಣಿಜ್ಯ ಮಂಡಳಿ ಮೊದಲ ಮಹಿಳಾ ಅಧ್ಯಕ್ಷೆ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಈ ಮೂಲಕ ದಾಖಲೆ ಮಾಡಿದ್ದರು.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ