ಸರಸ್ವತಿ *
ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಹಲವು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ “ಸರಳ ಸುಬ್ಬರಾವ್” ಚಿತ್ರ ಈ ವಾರ ಫೆಬ್ರವರಿ 20 ರಂದು ತೆರೆಗೆ ಬರುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಪ್ರದೀಪ್ ಪದ್ಮಕುಮಾರ್ ಅವರ ಛಾಯಾಗ್ರಹಣವಿದೆ. ಬಸವರಾಜ ಅರಸ್ ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಮದನ್ – ಹರಿಣಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಅಜೇಯ್ ರಾವ್, ಮಿಶಾ ನಾರಂಗ್, ರಂಗಾಯಣ ರಘು, ನಟ ಶ್ರೀ, ಚಿತ್ಕಲಾ ಬಿರಾದಾರ್, ವಿಜಯ್ ಚಂಡೂರ್, ರಘು ರಾಮನಕೊಪ್ಪ ಮುಂತಾದವರು “ಸರಳ ಸುಬ್ಬರಾವ್” ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





