ರಾಘವೇಂದ್ರ ಅಡಿಗ ಎಚ್ಚೆನ್.

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಬಹು ನೀರೀಕ್ಷಿತ ‘ವೀರ ಕಂಬಳ’ ಸಿನಿಮಾ ಈ ಶುಕ್ರವಾರ (ಫೆ. 27) ರಾಜ್ಯಾದ್ಯಂತ ವಿಜಯ್ ಸಿನಿಮಾಸ್ ಮುಖೇನ ಬಿಡುಗಡೆ ಆಗುತ್ತಿದೆ. ಈಗಾಗಲೇ ಟ್ರೇಲರ್ ಮೂಲಕ ಸೌಂಡ್ ಮಾಡಿರುವ ಚಿತ್ರದ ನಾಯಕನಾಗಿ ಆದಿತ್ಯ ಅಭಿನಯ ಮಾಡಿದ್ದಾರೆ. ಚಿತ್ರವನ್ನು ಬಾಬಾಸ್ ಬ್ಲೆಸಿಂಗ್ ಫಿಲ್ಮ್ಸ ಬ್ಯಾನರ್ನಲ್ಲಿ ಡಾ. ವಿನಿತ ವಿಜಯ್ ಕುಮಾರ್ ರೆಡ್ಡಿ ಹಾಗೂ ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ರಾಜೇಶ್ ಕುಡ್ಲ ಕಾರ್ಯಕಾರಿ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ.  ತುಳುನಾಡಿನ ಜನಜೀವನದೊಂದಿಗೆ ಹೊಸೆದುಕೊಂಡಿರುವ ಕಂಬಳ ಎಂಬುದು ಬಹು ಹಿಂದಿನಿಂದಲೂ ಚಿತ್ರರಂಗದವರನ್ನು ಸೆಳೆಯುತ್ತಾ ಬಂದಿದೆ.
ಆದರೆ, ಅದನ್ನು ಇಡಿಯಾಗಿ ದೃಷ್ಯಗಳಲ್ಲಿ ಹಿಡಿದಿಡುವಂಥಾ ಪ್ರಯತ್ನಗಳು ನಡೆದಿರಲಿಲ್ಲ. ಇದೀಗ ಆ ಪ್ರಯತ್ನವನ್ನು ಮೂಲತಃ ದಕ್ಷಿಣ ಕನ್ನಡ ಭಾಗದವರಾದ ರಾಜೇಂದ್ರ ಸಿಂಗ್ ಬಾಬು ಅವರು ಮಾಡಿದ್ದಾರೆ. ’ವೀರ ಕಂಬಳ’ದಲ್ಲಿ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಂಬಳದ ಸುತ್ತಾ ಘಟಿಸುವ ರೋಚಕ ಕಥೆ ಇದೆ. ಅಂದಂಗೆ ಈ ಸಿನಿಮಾ ಕನ್ನಡ ಮತ್ತು ತುಳು ಭಾಷೆಯಲ್ಲಿ ತಯಾರಾಗಿದ್ದು, ತುಳುನಲ್ಲಿ ’ಬಿರ್ದ್ದ ಕಂಬುಳ’ ಎಂದು ಹೆಸರಿಡಲಾಗಿದೆ. ಕಂಬಳದ ಸುತ್ತಾ ಮುಂಬೈ ಭೂಗತ ಜಗತ್ತಿನ ನಂಟಿರುವ ರೋಚಕ ಅಂಶಗಳೊಂದಿಗೆ ಈ ಕಥನ ಸೃಷ್ಟಿಯಾಗಿರುವುದು ವಿಶೇಷ. ಚಿತ್ರದ ಮುಖ್ಯ ಪಾತ್ರಗಳಲ್ಲಿ ಪ್ರಕಾಶ್ ರೈ, ರವಿಶಂಕರ್ ಇದ್ದು, ರಾಧಿಕಾ ನಾರಾಯಣ್ ವಿಶೇಷ ಪಾತ್ರಕ್ಕೆ ಜೀವ ತುಂಬಿದ್ದಾರೆ.
ತುಳು ಭಾಷೆಯಲ್ಲಿಯೂ ಬಿಡುಗಡೆಗೊಳ್ಳಲಿರುವ ಸದರಿ ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ಧ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ. ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರಿ‍್ಗರಿ ಛಾಯಾಗ್ರಹಣ, ಶ್ರೀನಿವಾಸ್ ಎಸ್ ಬಾಬು ಸಂಕಲನ, ಚಂದ್ರಶೇಖರ್ ಸುವರ್ಣ ಮುಲ್ಕಿ ಕಲಾ ನಿರ್ದೇಶನ, ಕಾಂತ ಪ್ರಸಾದನ ಹಾಗೂ ಭಾಷಾ ಅವರ ವಸ್ತ್ರವಿನ್ಯಾಸ ಈ ಚಿತ್ರಕ್ಕಿದೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ