– ರಾಘವೇಂದ್ರ ಅಡಿಗ ಎಚ್ಚೆನ್.
ದಕ್ಷಿಣ ಭಾರತದ ಖ್ಯಾತ ನಟರು ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿರುವ ಐಶಾರಾಮಿ ಐಟಿಸಿ ಹೋಟೆಲ್ ರೆಸಾರ್ಟ್ನಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿವಾಹದ ಮರುದಿನವೇ ಈ ಜೋಡಿ ದೆಹಲಿಗೆ ತೆರಳಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಮಾರ್ಚ್ 4ರಂದು ಹೈದರಾಬಾದ್ನಲ್ಲಿ ನಡೆಯಲಿರುವ ಆರತಕ್ಷತೆ ಸಮಾರಂಭಕ್ಕೆ ಪ್ರಧಾನಿಯನ್ನು ಆಹ್ವಾನಿಸಿದರೆಂದು ತಿಳಿದುಬಂದಿದೆ.
ಮದುವೆಗೂ ಮುನ್ನವೇ ಪ್ರಧಾನಿ ಮೋದಿ ಅವರು ಪತ್ರದ ಮೂಲಕ ವಧು-ವರರಿಗೆ ಶುಭಾಶಯ ಕೋರಿದ್ದರು. ವಿಜಯ್ ದೇವರಕೊಂಡ ಅವರ ತಂದೆ ಕಳುಹಿಸಿದ್ದ ಆಹ್ವಾನ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಮೋದಿ ಅಭಿನಂದನಾ ಪತ್ರ ರವಾನಿಸಿದ್ದರು ಎನ್ನಲಾಗಿದೆ.
ಇದೀಗ ವಿವಾಹ ಸಮಾರಂಭದ ಬಳಿಕ ಆರತಕ್ಷತೆ ಕಾರ್ಯಕ್ರಮವನ್ನು ಹೈದರಾಬಾದ್ನಲ್ಲಿ ಅದ್ಧೂರಿಯಾಗಿ ನಡೆಸಲು ಸಿದ್ಧತೆಗಳು ಜೋರಾಗಿವೆ. ರಾಜಕೀಯ ಹಾಗೂ ಚಲನಚಿತ್ರ ಕ್ಷೇತ್ರದ ಗಣ್ಯರನ್ನು ಖುದ್ದಾಗಿ ಆಹ್ವಾನಿಸುವ ಕಾರ್ಯದಲ್ಲಿ ರಶ್ಮಿಕಾ ಮತ್ತು ವಿಜಯ್ ತೊಡಗಿಸಿಕೊಂಡಿದ್ದಾರೆ.





