– ರಾಘವೇಂದ್ರ ಅಡಿಗ ಎಚ್ಚೆನ್.
ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಟೀಸರ್ ಎರಡು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿ ಎಲ್ಲೆಡೆ ಹಲ್ ಚಲ್ ಎಬ್ಬಿಸಿದೆ. ಅಷ್ಟೇ ಅಲ್ಲದೆ ಟಾಕ್ಸಿಕ್ ಟೀಸರ್ ನೋಡಿದ ಪ್ರೇಕ್ಷಕರ ನಿರೀಕ್ಷೆ ದುಪ್ಪಟ್ಟಾಗಿದೆ. ಜೊತೆಗೆ ಮಾರ್ಚ್ 19ರಂದು ‘ಟಾಕ್ಸಿಕ್’ ಅದ್ದೂರಿಯಾಗಿ ರಿಲೀಸ್ ಆಗಲಿದೆ. ಈ ನಡುವೆ ಇದೀಗ ಟಾಕ್ಸಿಕ್ ಸಿನಿಮಾದ ಬಗ್ಗೆ ಮತ್ತೊಂದು ಅಪ್ಡೇಟ್ ಹೊರಬಿದ್ದಿದೆ.
ಟಾಕ್ಸಿಕ್ ಸಿನಿಮಾ ಬಿಡುಗಡೆಗೆ ಇನ್ನೂ ಕೆಲ ದಿನಗಳಷ್ಟೇ ಬಾಕಿ ಉಳಿದಿದೆ. ಹೀಗಿರುವಾಗ ಇದೀಗ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಬಗ್ಗೆ ಹೊಸ ವಿಷ್ಯ ಒಂದು ಹೊರ ಬಿದ್ದಿದೆ. ಅದೇನೆಂದರೆ ಟಾಕ್ಸಿಕ್ ಸಿನಿಮಾದ ‘ತಬಾಹಿ’ ಎಂಬ ಮೊದಲ ಹಾಡು ಮಾರ್ಚ್ 2 ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಇನ್ನೂ ಈ ಬಗ್ಗೆ ಚಿತ್ರತಂಡ ಪೋಸ್ಟರ್ ಒಂದನ್ನು ರಿಲೀಸ್ ಮಾಡಿದ್ದಾರೆ. ಪೋಸ್ಟರ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ಒಂದು ಹುಡುಗಿಯನ್ನು ತನ್ನ ಭುಜದ ಮೇಲೆ ಎತ್ತಿಕೊಂಡು ನಡೆಯುತ್ತಿರುವುದನ್ನು ಕಾಣಬಹುದಾಗಿದೆ. ಇದೀಗ ಫೋಟೋ ಕಂಡ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ. ಹಾಗೆಯೇ ಯಾರು ಈ ನಟಿ ಎಂಬ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.
ಮೂಲಗಳ ಪ್ರಕಾರ ಯಶ್ ಎತ್ತಿಕೊಂಡಿರುವ ನಟಿ ಕಿಯಾರಾ ಎಂದು ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಇನ್ನೂ ನಾಲ್ಕು ಜನ ನಟಿಯರು ಅಭಿನಯಿಸುತ್ತಿದ್ದು. ಹೀಗಾಗಿ ಯಾರು ಎಂದು ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ ಎಂದು ಹೇಳಲಾಗುತ್ತಿದೆ.





