ರಾಘವೇಂದ್ರ ಅಡಿಗ ಎಚ್ಚೆನ್.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ ಅವರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಜೈಲಿನಲ್ಲಿ ವಿಶೇಷ ಅನುಮತಿಯೊಂದಿಗೆ ಮನೆಯಿಂದ ಊಟ ತರಿಸಿಕೊಳ್ಳುತ್ತಿದ್ದ ಅವಕಾಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ ಅವರಿಗೆ ಈ ಹಿಂದೆ 57ನೇ ಸಿಸಿಎಚ್ ನ್ಯಾಯಾಲಯ ವಾರಕ್ಕೊಮ್ಮೆ ಅಥವಾ ವೈದ್ಯಕೀಯ ಕಾರಣಗಳಿದ್ದಲ್ಲಿ ಮನೆ ಊಟಕ್ಕೆ ಅನುಮತಿ ನೀಡಿತ್ತು. ಅದರಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದವರು ಮನೆಯಿಂದ ಆಹಾರ ತರಿಸಿಕೊಳ್ಳುತ್ತಿದ್ದರು.

ಆದರೆ ಈ ವಿಶೇಷ ಸೌಲಭ್ಯವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ವಿಚಾರಿಸಿದ ಹೈಕೋರ್ಟ್ ಪೀಠವು, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದಲ್ಲಿ, ಟ್ರಯಲ್ ಕೋರ್ಟ್ ಆದೇಶವನ್ನು ರದ್ದುಪಡಿಸಿದೆ. “ಆರೋಪಿ ಕೇಳಿದ ಕೂಡಲೇ ಮನೆ ಊಟಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ; ವೈದ್ಯಕೀಯ ಸಲಹೆ ಇದ್ದರೆ ಮಾತ್ರ ಅವಕಾಶ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಜೈಲು ಅಧಿಕಾರಿಗಳು ಆರಂಭದಿಂದಲೂ ಮನೆಯಿಂದ ಆಹಾರ ತರಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದರು. ಎಫ್‌ಎಸ್‌ಎಸ್‌ಎಐ ಮಾರ್ಗಸೂಚಿಗಳಂತೆ ಜೈಲಿನಲ್ಲಿ ಗುಣಮಟ್ಟದ ಆಹಾರ ಒದಗಿಸಲಾಗುತ್ತಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

 

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ