ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ಇಂಧನ ಕೊರತೆ ಭೀತಿ ತೀವ್ರಗೊಂಡಿದೆ. ಇದರ ಪರಿಣಾಮ, ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಶರೀಷ್ ಅವರು ತುರ್ತು ಕ್ರಮವಾಗಿ ಶಾಲೆಗಳಿಗೆ 2 ವಾರ ರಜೆ ಘೋಷಿಸಿದ್ದು, ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಗಳ ಕಾಲ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.

ಈ ಕ್ರಮದ ಮೂಲಕ ಇಂಧನ ಸಂರಕ್ಷಣೆ ಮತ್ತು ಇಂಧನ ಸರಬರಾಜು ನಿರ್ವಹಣೆಯನ್ನು ಸುಗಮಗೊಳಿಸಲು ಪಾಕಿಸ್ತಾನ ಉದ್ದೇಶಿಸಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಲೆಕ್ಟ್ರಿಕ್ ಬಳಕೆ ಮೇಲೆ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಅನಾವಶ್ಯಕ ಬಳಕೆಯನ್ನು ತಡೆಯುವಂತೆ ಮನವಿ ಮಾಡಲಾಗಿದೆ.

ಇಂಧನ ಭೀತಿಯಿಂದ ಪಾಕಿಸ್ತಾನದಲ್ಲಿ ಕಳೆದ ದಿನಗಳಲ್ಲಿ ಬೆಲೆ ಏರಿಕೆ, ವಾಹನಗಳು ಮತ್ತು ಉದ್ಯಮಗಳಿಗೆ ತೊಂದರೆ ಉಂಟಾಗಿದೆ. ಆದ್ದರಿಂದ ಶಾಲೆಗಳನ್ನು ಬಂದ್ ಮಾಡುವುದು ಮತ್ತು ಕಚೇರಿಗಳ ಕೆಲಸಗಳನ್ನು ಕಡಿಮೆ ಮಾಡುವುದು ತಾತ್ಕಾಲಿಕ ಪರಿಹಾರ ಎಂದು ಸರ್ಕಾರ ತಿಳಿಸಿದೆ.

ಜಾಗತಿಕ ತೈಲ ಸರಬರಾಜಿಗೆ ಪ್ರಮುಖವಾದ Strait of Hormuz ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.

ತೈಲ ಸಾಗಣೆ ತಡೆ ಅಥವಾ ಬಂದ್ ಆದರೆ ಪಾಕಿಸ್ತಾನ ಸೇರಿದಂತೆ ಇಂಧನ ಆಧಾರಿತ ದೇಶಗಳಲ್ಲಿ ತೀವ್ರ ಸಂಕಷ್ಟ ಎದುರಾಗಲಿದೆ ಎಂದು ವಿಶ್ಲೇಷಕರು ಎಚ್ಚರಿಸಿದ್ದಾರೆ.

ಪಾಕಿಸ್ತಾನದ ನಾಗರಿಕರು, ಶೈಕ್ಷಣಿಕ ಸಂಸ್ಥೆಗಳು ಮತ್ತು ಉದ್ಯಮಗಳು ಈಗಾಗಲೇ ಇಂಧನ ಬಳಕೆಯನ್ನು ಕಡಿಮೆ ಮಾಡುವ ಪ್ರಯತ್ನ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ಅಲ್ಲಿನ ಸರ್ಕಾರ ಇಂಧನ ಸುಧಾರಣೆಗೆ ಹೆಚ್ಚಿನ ಕ್ರಮಗಳನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ