– ರಾಘವೇಂದ್ರ ಅಡಿಗ ಎಚ್ಚೆನ್.
‘ಕೆಡಿ’ ಸಿನಿಮಾದ ಸರ್ಸೆ ಸೆರಗ ಸರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ ಹಿನ್ನೆಲೆಯಲ್ಲಿ ನಿರ್ದೇಶಕ ಪ್ರೇಮ್ ನಟಿ ನೋರಾ ಫತೇಹಿ ಸೇರಿದಂತೆ ಹಲವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ನಿರ್ದೇಶಕ ಪ್ರೇಮ್, ನಿರ್ಮಾಪಕ ವೆಂಕಟ್ ನಾರಾಯಣ್, ನಟಿ ನೋರಾ ಫತೇಹಿ ನಟ ಸಂಜಯ್ ದತ್, ಹಿಂದಿ ಹಾಡಿನ ಬರಹಾರ ರಕೀಬ್ ಆಲ್ಬಂಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮಾ.24 ರಂದು ಮಧ್ಯಾಹ್ನ 12:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿದ ರಾಷ್ಟ್ರೀಯ ಮಹಿಳಾ ಆಯೋಗ, 1990ರ ಎನ್ಸಿಡಬ್ಲ್ಯೂ ಕಾಯ್ದೆಯ ಅಡಿಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲು ಮಾಡಿದೆ. ಪ್ರಾಥಮಿಕ ಲೈಂಗಿಕವಾಗಿ ಸೂಚಿಸುವ, ಆಕ್ಷೇಪಾರ್ಹ ಮತ್ತು ಭಾರತೀಯ ನ್ಯಾಯ ಸಂಹಿತಾ, ಐಟಿ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿರುವ ನಿಬಂಧನೆಗಳನ್ನು ಸಿನಿಮಾ ಟೀಂ ಉಲ್ಲಂಘಿಸಿದೆ ಎಂದು ನೋಟಿಸ್ನಲ್ಲಿ ಉಲ್ಲೇಖಿಸಿದೆ. ಸಂಬಂಧಿತ ದಾಖಲಾಗಳೊಂದಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಹಾಜರಾಗಲು ವಿಫಲವಾದರೆ ಕಾನೂನಿನ ಪ್ರಕಾರ ಸೂಕ್ತ ಕ್ರಮ ತಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.





