ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಇದರ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್ (22), ಸುಲ್ಫಿ (45), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್(45) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್  ಮೃತಪಟ್ಟವರು. ಚನ್ನಪಟ್ಟಣ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ