– ರಾಘವೇಂದ್ರ ಅಡಿಗ ಎಚ್ಚೆನ್.
ಒರಿಸ್ಸಾದ ಭುವನೇಶ್ವರದಲ್ಲಿ ನಡೆದ ಪ್ರತಿಷ್ಠಿತ ಫೆಮಿನಾ ಮಿಸ್ ಇಂಡಿಯಾ 2026 (Femina Miss India 2026) ಸೌಂದರ್ಯ ಸ್ಪರ್ಧೆಯಲ್ಲಿ ಕಾರವಾರ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾದ್ವಿ ಸತೀಶ್ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಭುವನೇಶ್ವರದ ಕಳಿಂಗಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (KIIT) ಯಲ್ಲಿ ನಡೆದ ಅದ್ದೂರಿ ಹಾಗೂ ಭವ್ಯ ಅಂತಿಮ ಸಮಾರಂಭದಲ್ಲಿ ಸಾದ್ವಿ ಸತೀಶ್ ಅವರು ಈ ಪ್ರತಿಷ್ಠಿತ #ಕಿರೀಟವನ್ನು ಮುಡಿಗೇರಿಸಿಕೊಂಡರು.

ಈ ಐತಿಹಾಸಿಕ ಗೆಲುವಿನೊಂದಿಗೆ ಅವರು ಮುಂಬರುವ ‘ಮಿಸ್ ವರ್ಲ್ಡ್ 2027’ (Miss World 2027) #ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಲಿದ್ದಾರೆ.
ಈ ಸ್ಪರ್ಧೆಯಲ್ಲಿ ಮಹಾರಾಷ್ಟ್ರದ ರಾಜನಂದಿನಿ ಪವಾರ್ (Rajnandini Pawar) ಅವರು ಪ್ರಥಮ ರನ್ನರ್-ಅಪ್ ಆಗಿ ಹೊರಹೊಮ್ಮಿದರೆ, ಯೂನಿಯನ್ ಟೆರಿಟರಿಯ ಶ್ರೀಅದ್ವೈತ (Sree Advaita) ಅವರು ದ್ವಿತೀಯ ರನ್ನರ್-ಅಪ್ ಆಗಿ ಆಯ್ಕೆಯಾಗಿದ್ದಾರೆ.
ಸಾದ್ವಿ ಸತೀಶ್ ಸೈಲ್ ಅವರು ಕೇವಲ ಮಾಡೆಲ್ ಮಾತ್ರವಲ್ಲ, ಓರ್ವ ಯಶಸ್ವಿ ಉದ್ಯಮಿಯೂ ಹೌದು. ಗೋವಾದಲ್ಲಿ ಉದ್ಯಮಿಯಾಗಿ ಗುರುತಿಸಿಕೊಂಡಿರುವ ಇವರು, ಕ್ಯಾಲಿಫೋರ್ನಿಯಾ, ಬುರಿಟೋ ಸೇರಿದಂತೆ ಹಲವು ಪ್ರಸಿದ್ಧ ಬ್ರಾಂಡ್‌ಗಳ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಇದರ ಜೊತೆಗೆ, ನಿರ್ಮಾಣ ಹಾಗೂ ಅಭಿವೃದ್ಧಿ (Construction & Development) ಕ್ಷೇತ್ರದಲ್ಲಿ ಸಹ-ಸ್ಥಾಪಕರಾಗಿಯೂ ಅವರು ಸಕ್ರಿಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ದೇಶದ ವಿವಿಧ ರಾಜ್ಯಗಳ ಪ್ರತಿಭಾವಂತ ಯುವತಿಯರನ್ನು ಒಂದೇ ವೇದಿಕೆಯಲ್ಲಿ ಸೇರಿಸಿದ ಈ ಬಾರಿಯ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯು ಮಹಿಳೆಯರ ಸೌಂದರ್ಯ, ಬುದ್ಧಿಮತ್ತೆ ಮತ್ತು ವ್ಯಕ್ತಿತ್ವದ ಅನಾವರಣಕ್ಕೆ ಅದ್ಭುತ ವೇದಿಕೆಯಾಗಿತ್ತು.
ತಮ್ಮ ಮುದ್ದಿನ ಮಗಳು ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಸಂತಸದ ಸುದ್ದಿ ತಿಳಿಯುತ್ತಿದ್ದಂತೆ, ಕಾರವಾರ ಶಾಸಕ ಸತೀಶ್ ಸೈಲ್ ಅವರು ತಕ್ಷಣವೇ ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿ ತಮ್ಮ ಹರ್ಷ ವ್ಯಕ್ತಪಡಿಸಿದರು ಹಾಗೂ ಮಗಳ ಈ ಮಹತ್ತರ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸಿದರು.





