ರಾಘವೇಂದ್ರ ಅಡಿಗ ಎಚ್ಚೆನ್.

ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ಪುಂಡಾಟದ ಮೂಲಕ ವಿವಾದಕ್ಕೀಡಾಗಿದ್ದಾರೆ. ಪೆಟ್ರೋಲ್ ಬಾಂಬ್ ಮಾದರಿಯಲ್ಲಿ ಸ್ಫೋಟ ಉಂಟುಮಾಡಿ ರೀಲ್ಸ್ ಶೂಟ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಕವರ್ ಒಳಗೆ ಪೆಟ್ರೋಲ್ ಹಾಕಿ ಸ್ಫೋಟಗೊಳಿಸಿರುವ ದೃಶ್ಯಗಳು ಕಂಡುಬಂದಿವೆ. ಸಾರ್ವಜನಿಕ ರಸ್ತೆಯಲ್ಲೇ ಈ ರೀತಿಯ ಅಪಾಯಕಾರಿ ಕೃತ್ಯ ಮಾಡಿ ವೀಡಿಯೊ ಚಿತ್ರೀಕರಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಘಟನೆ ಎಲ್ಲಿ ನಡೆದಿದೆ, ಯಾವಾಗ ಶೂಟ್ ಮಾಡಲಾಗಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದರೆ, ಮುಂಜಾಗ್ರತಾ ಕ್ರಮಗಳಿಲ್ಲದೆ ಈ ರೀತಿಯ ಸ್ಫೋಟಕ ಕೃತ್ಯ ನಡೆಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.
ಇಂತಹ ಅಪಾಯಕಾರಿ ಸ್ಟಂಟ್ ವೇಳೆ ಅವಘಡ ಸಂಭವಿಸಿದ್ದರೆ ಅದರ ಹೊಣೆ ಯಾರು ಹೊತ್ತಿರುತ್ತಿದ್ದರು ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ. ಸಾರ್ವಜನಿಕ ಸುರಕ್ಷತೆಗೆ ಧಕ್ಕೆಯಾಗುವ ಈ ರೀತಿಯ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹವೂ ಕೇಳಿಬರುತ್ತಿದೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ