ರಾಘವೇಂದ್ರ ಅಡಿಗ ಎಚ್ಚೆನ್.

‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರ ಕುಟುಂಬದಿಂದ ಮತ್ತೋರ್ವ ಹೀರೋ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹೌದು, ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್  ಅವರು ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾ ಈಗಾಗಲೇ ಟೀಸರ್ ಮತ್ತಿತರೆ ವೈವಿದ್ಯಮಯ ಕಂಟೆಂಟ್ ಮೂಲಕ ಗಮನ ಸೆಳೆದಿದ್ದು ಇದೀಗ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಮುಂಬರುವ ಜೂನ್ 5ಕ್ಕೆ ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಕಿಚ್ಚ ಸುದೀಪ್ ಅವರು ಅಕ್ಕನ ಮಗನ ಮೊದಲ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ.

mango

‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ಮೈಸೂರು ಭಾಗದ ಕಹಾನಿ ಇದೆ. ಮೈಸೂರಿನಲ್ಲೇ ‘ಮ್ಯಾಂಗೋ ಪಚ್ಚ’ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಕ್ರೈಂ ಥ್ರಿಲ್ಲರ್ ಕಹಾನಿಯನ್ನು ಈ ಚಿತ್ರ ಹೊಂದಿದೆ. ಮಾವ ಕಿಚ್ಚ ಸುದೀಪ್ ರೀತಿಯೇ ಸಂಚಿತ್ ಕೂಡ ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆಯುವ ಲಕ್ಷಣಗಳು ಕಾಣುತ್ತಿವೆ. ಇದು ವಿವೇಕ ಅವರ ಚೊಚ್ಚಲ ನಿರ್ದೇಶನದ ಸಿನಿಮಾ. 2001ರಿಂದ 2011ರ ಅವಧಿಯಲ್ಲಿ ಮೈಸೂರಿನಲ್ಲಿ ನಡೆದ ಪ್ರಮುಖ ಘಟನೆಗಳು ‘ಮ್ಯಾಗೋ ಪಚ್ಚ’ ಸಿನಿಮಾದಲ್ಲಿವೆ. ಈ ಚಿತ್ರಕ್ಕೆ ಕೆಆರ್‌ಜಿ ಮತ್ತು ಕಿಚ್ಚ ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ಬಂಡವಾಳ ಹೂಡಿವೆ. ಪ್ರಿಯಾ ಸುದೀಪ್, ಕಾರ್ತಿಕ್, ಯೋಗಿ ಜಿ. ರಾಜ್ ಅವರು ನಿರ್ಮಾಪಕರಾಗಿದ್ದಾರೆ.
ನಟಿ ಕಾಜಲ್ ಕುಂದರ್ ಅವರು ‘ಮ್ಯಾಂಗೋ ಪಚ್ಚ’ ಸಿನಿಮಾಗೆ ನಾಯಕಿ ಆಗಿದ್ದಾರೆ. ಮಯೂರ್ ಪಟೇಲ್, ವಿಜಯ ರಾಘವೇಂದ್ರ ಅವರ ಅಕ್ಕನ ಮಗ ಜೇಯ್, ಮಾಲಾಶ್ರೀ, ಬಿಗ್ ಬಾಸ್ ಖ್ಯಾತಿಯ ನಟಿ ಹಂಸ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಚರಣ್ ರಾಜ್ ಅವರು ಸಂಗೀತ ನೀಡಿದ್ದಾರೆ. ಶೇಖರ್ ಚಂದ್ರ ಅವರು ಛಾಯಾಗ್ರಾಹಣ ಮಾಡಿದ್ದಾರೆ.
ಟಾಕ್ಸಿಕ್ ಬಿಡುಗಡೆ ಮುಂದಕ್ಕೆ
ಇನ್ನು  ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಜೂನ್ 4ಕ್ಕೆ ನಿಗದಿಯಾಗಿದ್ದ ಬಿಡುಗಡೆಯನ್ನು ಜಾಗತಿಕ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಬಿಡುಗಡೆ ಮಾಡುವ ಸಲುವಾಗಿ ಮುಂದಕ್ಕೆ ಹಾಕಲಾಗಿದೆ. ‘ಸಿನಿಮಾ ಕಾನ್’ನಲ್ಲಿ ಸಿಕ್ಕ ಪ್ರತಿಕ್ರಿಯೆಯಿಂದ ಯಶ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ