-ರಾಘವೇಂದ್ರ ಅಡಿಗ ಎಚ್ಚೆನ್.

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಡಾ. ಧನ್ಯತಾ ದಂಪತಿ ತಮ್ಮ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ಕಾಲಿಡಲು ಸಜ್ಜಾಗಿದ್ದು, ಮೊದಲ ಮಗುವಿನ ನಿರೀಕ್ಷೆಯ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಸಂತಸದ ಕ್ಷಣವನ್ನು ಹಂಚಿಕೊಂಡಿರುವ ದಂಪತಿ, “Our universe is expanding” ಎಂಬ ಭಾವನಾತ್ಮಕ ಸಂದೇಶದೊಂದಿಗೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಇದಕ್ಕೂ ಮೊದಲು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಫೋಟೋ ಒಂದರಲ್ಲಿ ಧನ್ಯತಾ ಗರ್ಭಿಣಿಯಾಗಿರುವ ಸುಳಿವು ಸಿಕ್ಕಿದ್ದರೂ, ದಂಪತಿ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ. ಇದೀಗ ಬೇಬಿ ಬಂಪ್ ಫೋಟೋಶೂಟ್ ಮೂಲಕ ಅದನ್ನು ದೃಢಪಡಿಸಿ, ಸುಂದರ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಡಾಲಿ ಧನಂಜಯ್ ಅವರು 2025ರ ಫೆಬ್ರವರಿ 16ರಂದು ಮೈಸೂರು ನಗರದಲ್ಲಿ ಡಾ. ಧನ್ಯತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಮತ್ತು ಆರತಕ್ಷತೆ ಸಮಾರಂಭಕ್ಕೆ ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಭಾಗವಹಿಸಿ ದಂಪತಿಗೆ ಶುಭಾಶಯ ಕೋರಿದ್ದರು.
ಈಗ ಸ್ಟಾರ್ ಜೋಡಿಯ ಈ ಹೊಸ ಸಂತಸದ ಸುದ್ದಿಗೆ ಅಭಿಮಾನಿಗಳಿಂದ ಅಭಿನಂದನೆಗಳ ಸುರಿಮಳೆ ಹರಿದುಬರುತ್ತಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ