ಮಹಾ ಕುಂಭಮೇಳದಲ್ಲಿ ಖ್ಯಾತಿ ಪಡೆದಿದ್ದ ಮೊನಾಲಿಸಾ ಭೋಸ್ಲೆ ಗಂಭೀರ ಆರೋಪಗಳೊಂದಿಗೆ ಇದೀಗ ಕಾನೂನು ಹೋರಾಟ ಆರಂಭಿಸಿದ್ದಾರೆ.

ಪೋಕ್ಸೋ ಕಾಯ್ದೆಡಿ ನಿರ್ದೇಶಕ ಸನೋಜ್ ಮಿಶ್ರಾ, ವಿಶ್ವ ಹಿಂದೂ ಪರಿಷತ್ ಸಂಬಂಧಿತ ಮುಖಂಡ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.

ತನ್ನ ಮೇಲೆ ಲೈಂಗಿಕ ದೌರ್ಜನ್ಯ, ಮಾನಸಿಕ ಹಿಂಸೆ ಹಾಗೂ ಬೆದರಿಕೆ ನೀಡಲಾಗಿದೆ ಎಂದು ಮೊನಾಲಿಸಾ ಭೋಸ್ಲೆ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಎರ್ನಾಕುಲಂ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದಿ ಡೈರಿ ಆಫ್ ಮಣಿಪುರಚಿತ್ರದ ಚಿತ್ರೀಕರಣದ ವೇಳೆ ನಿರ್ದೇಶಕ ಸನೋಜ್ ಮಿಶ್ರಾ ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮೊನಾಲಿಸಾ ಆರೋಪಿಸಿದ್ದಾರೆ.

ಇದೇ ವೇಳೆ ವಕೀಲ ಅನಿಲ್ ವಿಲಾಯಿಲ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಮಾನಹಾನಿ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಮೊನಾಲಿಸಾ ಫರ್ಮಾನ್‌ ಅವರನ್ನು ವಿವಾಹವಾಗಿದ್ದಾರೆ. ಕೆಲವರು ಅವರ ವಿವಾಹವನ್ನು ʼಲವ್‌ ಜಿಹಾದ್‌ʼ ಎಂದು ಕರೆದಿದ್ದಾರೆ. ಇದರಲ್ಲಿ ನಿರ್ದೇಶಕ ಸನೋಜ್‌ ಮಿಶ್ರಾ ಕೂಡ ಇದ್ದಾರೆ. ಈ ಪ್ರಕರಣವು ಮೊನಾಲಿಸಾ ಅವರ ವೈಯಕ್ತಿಕ ಜೀವನದ ವಿವಾದದೊಂದಿಗೆ ತಳುಕು ಹಾಕಿಕೊಂಡಿದೆ. ಮೊನಾಲಿಸಾ ವಿವಾಹ ಕುಟುಂಬದ ತೀವ್ರ ವಿರೋಧಕ್ಕೆ ಕಾರಣವಾಗಿದೆ.

ಮದುವೆಯ ಸಮಯದಲ್ಲಿ ಮೊನಾಲಿಸಾ ಅಪ್ರಾಪ್ತ ವಯಸ್ಕಳಾಗಿದ್ದಳು ಮತ್ತು ಅವಳನ್ನು ದಾರಿತಪ್ಪಿಸಿ ಮದುವೆಯಾಗಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಅಲ್ಲದೆ, ಈ ಮದುವೆಯ ಹಿಂದೆ ಲವ್ ಜಿಹಾದ್ಸಂಚಿದೆ ಎಂದು ಆರೋಪಿಸಿ ಫರ್ಮಾನ್ ವಿರುದ್ಧ ಈ ಹಿಂದೆ ದೂರು ನೀಡಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ