ರಾಘವೇಂದ್ರ ಅಡಿಗ ಎಚ್ಚೆನ್.

ಸ್ಯಾಂಡಲ್ವುಡ್ನ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಸಂಜೆ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ನೆರವೇರಿದೆ.  ರಾಮನಗರ ತಾಲೂಕಿನ ಗುನ್ನೂರು ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಿದೆ.

cremation 2

ದಿಲೀಪ್ ರಾಜ್ ಅವರು 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ನಂತರ ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.
ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ `ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್ ರಾಜ್ ಕೊನೆಯದಾಗಿ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರಾವಾಹಿಗಳಲ್ಲೂ ನಟಿಸಿದ್ದರು.

cremation 1

ಲವ್ ಮಾಕ್ಟೇಲ್ 3’ನ ವಕೀಲ ಪಾತ್ರವೇ ದಿಲೀಪ್ ರಾಜ್ ಕೊನೆಯ ಸಿನಿಮಾ
ಎರಡು ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್, ತಮ್ಮ ವೃತ್ತಿಜೀವನದ ಕೊನೆಯ ಕ್ಷಣದವರೆಗೂ ನಟನೆಯನ್ನು ಮುಂದುವರಿಸಿದ್ದರು. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಮಿಲನ’ದಲ್ಲಿ ಅಣ್ಣನ ಪಾತ್ರ ಮಾಡುವ ಮೂಲಕ ಅವರು ಮನೆಮಾತಾಗಿದ್ದರು. ಇತ್ತೀಚೆಗೆ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ಅವರು ವಕೀಲನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅದೇ ಅವರ ಕೊನೆಯ ಅಭಿನಯವಾಗಿ ಉಳಿದಿದೆ.
‘ಲವ್ ಮಾಕ್ಟೇಲ್ 3’ನಲ್ಲಿ ದಿಲೀಪ್ ರಾಜ್ ಗಂಭೀರ ಮತ್ತು ಪ್ರಭಾವಿ ಲಾಯರ್ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಪಾತ್ರಕ್ಕೆ ಬೇಕಾದ ಸಂಯಮ, ಗಾಂಭೀರ್ಯ ಮತ್ತು ಪಕ್ವ ಅಭಿನಯವನ್ನು ಅವರು ಪರಿಣಾಮಕಾರಿಯಾಗಿ ತೆರೆಗೆ ತಂದಿದ್ದರು. ಆರಂಭದಲ್ಲಿ ಚಾಕೊಲೇಟ್ ಹೀರೋ ಇಮೇಜ್ ಹೊಂದಿದ್ದ ಅವರು, ನಂತರ ಪೋಷಕ ಪಾತ್ರಗಳ ಮೂಲಕ ಪ್ರೌಢ ನಟನಾಗಿ ಬೆಳೆದಿದ್ದರು ಎಂಬುದಕ್ಕೆ ಈ ಪಾತ್ರ ಸಾಕ್ಷಿಯಾಗಿದೆ.
ಸಿನಿಮಾ ಮಾತ್ರವಲ್ಲದೇ ಡಬ್ಬಿಂಗ್ ಮತ್ತು ನಿರ್ಮಾಣ ಕ್ಷೇತ್ರದಲ್ಲೂ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. ‘ಹಿಟ್ಲರ್ ಕಲ್ಯಾಣ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳ ಮೂಲಕ ಅವರು ಮನೆಮಾತಾಗಿದ್ದರು. ನಗುಮುಖ ಮತ್ತು ಸರಳ ವ್ಯಕ್ತಿತ್ವದಿಂದ ಎಲ್ಲರ ಮನ ಗೆದ್ದಿದ್ದ ದಿಲೀಪ್ ರಾಜ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ