Sj*
ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿರುವ ಲೋ ನವೀನ ಸಿನಿಮಾಗೆ ಇದೀಗ ದೊಡ್ಮನೆ ಕುಟುಂಬದಿಂದಲೂ ಪ್ರಶಂಸೆ ವ್ಯಕ್ತವಾಗಿದೆ. ಚಿತ್ರವನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್, ಸಿನಿಮಾ ತಂಡದೊಂದಿಗೆ ದೀರ್ಘಕಾಲ ಚರ್ಚೆ ನಡೆಸಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಚಿತ್ರದ ಕಥೆ, ಸಹಜ ಅಭಿನಯ ಹಾಗೂ ಮನರಂಜನಾತ್ಮಕ ನಿರೂಪಣೆಯ ಬಗ್ಗೆ ಮಾತನಾಡಿದ ಅವರು, “ಸರಳ ಕಥೆಯನ್ನು ಜನರ ಮನಸ್ಸಿಗೆ ತಲುಪುವ ರೀತಿಯಲ್ಲಿ ಹೇಳಿರುವುದು ಚಿತ್ರದ ದೊಡ್ಡ ಶಕ್ತಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಟ ನವೀನ್ ಸಜ್ಜು ಹಾಗೂ ಚಿತ್ರತಂಡದ ಪರಿಶ್ರಮವನ್ನು ಶ್ಲಾಘಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್, ಮುಂದಿನ ದಿನಗಳಲ್ಲಿ ಚಿತ್ರದ ಬೆಳವಣಿಗೆ ಹೇಗಿರಬೇಕು, ಯಾವ ರೀತಿಯ ಹೆಜ್ಜೆ ಇಡಬೇಕು ಎಂಬುದರ ಕುರಿತು ಸಹ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಮಂಡ್ಯ ಶೈಲಿಯ ಭಾಷೆ ಮತ್ತು ನೈಜ ಜೀವನಕ್ಕೆ ಹತ್ತಿರವಾಗಿರುವ ಪಾತ್ರಗಳು ಚಿತ್ರದ ವಿಶೇಷತೆ ಎಂದು ಹೇಳಿದ ಅವರು, “ಕನ್ನಡ ಚಿತ್ರರಂಗಕ್ಕೆ ನಿಮ್ಮಂತ ಪ್ರತಿಭಾವಂತ ಯುವ ಕಲಾವಿದರು ಅಗತ್ಯ” ಎಂದು ತಂಡಕ್ಕೆ ಶುಭ ಹಾರೈಸಿದ್ದಾರೆ.
ಸಿನಿಮಾ ಬಿಡುಗಡೆಯಾದ ನಂತರ ದಿನದಿಂದ ದಿನಕ್ಕೆ ಪ್ರೇಕ್ಷಕರ ಮೆಚ್ಚುಗೆ ಹೆಚ್ಚುತ್ತಿರುವ ನಡುವೆ, ದೊಡ್ಮನೆ ಕುಟುಂಬದಿಂದ ಬಂದ ಈ ಪ್ರಶಂಸೆ ಲೋ ನವೀನ ಚಿತ್ರತಂಡಕ್ಕೆ ಮತ್ತಷ್ಟು ಆತ್ಮವಿಶ್ವಾಸ ತುಂಬಿದಂತಾಗಿದೆ.





