– ರಾಘವೇಂದ್ರ ಅಡಿಗ ಎಚ್ಚೆನ್.

ದೈವ ಆರಾಧನೆ ಕುರಿತು ನೀಡಿದ್ದ ಹೇಳಿಕೆಯಿಂದ ವಿವಾದಕ್ಕೀಡಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಕ್ಷಮೆ ಕೋರಿದ್ದಾರೆ. ‘ಕಾಂತಾರ’ ಸಿನಿಮಾದ ದೈವ ಸಂಪ್ರದಾಯ ಕುರಿತು ನಡೆದ ಕಾರ್ಯಕ್ರಮವೊಂದರಲ್ಲಿ ರಣವೀರ್ ಸಿಂಗ್ ನೀಡಿದ್ದ ಹೇಳಿಕೆ ದೈವದ ಅವಹೇಳನವಾಗಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಈ ವಿಚಾರವಾಗಿ ಹಿರಿಯ ವಕೀಲ ಪ್ರಶಾಂತ್ ಮೆತಲ್ ಕಾನೂನು ಹೋರಾಟ ಆರಂಭಿಸಿ, ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕ್ರಮ ಕೈಗೊಂಡಿದ್ದರು. ಬಳಿಕ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು.

ಈ ವೇಳೆ ಹಲವು ಒತ್ತಡಗಳು ಬಂದಿದ್ದರೂ ವಕೀಲ ಪ್ರಶಾಂತ್ ಮೆತಲ್ ಹೋರಾಟದಿಂದ ಹಿಂದೆ ಸರಿಯದೆ, ತಾಯಿ ಚಾಮುಂಡಿ ಎದುರು ಕ್ಷಮೆ ಕೇಳಿದರೆ ಪ್ರಕರಣದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಅದರಂತೆ ಇಂದು ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದ್ದಾರೆ. ಈ ಬೆಳವಣಿಗೆಯನ್ನು ಕನ್ನಡಪರ ವಲಯಗಳು ಹಾಗೂ ದೈವ ಆರಾಧಕರು ಮಹತ್ವದ ಬೆಳವಣಿಗೆ ಎಂದು ಪರಿಗಣಿಸುತ್ತಿದ್ದಾರೆ

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ