Sj*

ಖ್ಯಾತ ಪತ್ರಕರ್ತ, ಲೇಖಕ ಪಿ.ಲಂಕೇಶ್ ಮೊಮ್ಮಗಳು, ನಿರ್ದೇಶಕಿ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ನಾಯಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಪ್ರೀತಂ ಗುಬ್ಬಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ‌. ನವಿಶಾ ಫಿಲಂಸ್ ಲಾಂಛನದಲ್ಲಿ ಶಿವರಾಜ್ ಕನಗನಪಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ ನಿರ್ಮಾಣದ ಎರಡನೇ ಚಿತ್ರವಾಗಿದೆ.

isha

ಈಗಾಗಲೇ ರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿರುವ ಇಶಾ ಲಂಕೇಶ್, ನಟನೆಗೆ ಬೇಕಾಗಿರುವ ಪೂರ್ವತಯಾರಿಗಳನ್ನು ಮಾಡಿಕೊಂಡಿದ್ದಾರೆ. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪ್ರೀತಂ ಗುಬ್ಬಿ ನಿರ್ದೇಶನ ಹಾಗೂ ಇಶಾ ಲಂಕೇಶ್ ಚೊಚ್ಚಲ ಅಭಿನಯದ ಈ ಚಿತ್ರದ ಕುರಿತು ಸಾಕಷ್ಟು ನಿರೀಕ್ಷೆ ಇದೆ.

ಸದ್ಯ ಇನ್ನೂ ಹೆಸರಿಡದ ಈ ನೂತನ ಚಿತ್ರದ ನಾಯಕಿಯ ಕುರಿತಾಗಿ ಮಾತ್ರ ತಿಳಿಸಿರುವ ನಿರ್ದೇಶಕ ಪ್ರೀತಂ ಗುಬ್ಬಿ, ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ